ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳು ಮಧ್ಯೆ ನಡೆದ ಗಲಾಟೆಯಲ್ಲಿ ಕಲ್ಲು ತೂರಾಟ ನಡೆಸಿ ಬಿಗುವಿನ ಸ್ಥಿತಿ ನಿರ್ಮಾಣವಾಗಿರುವ ಘಟನೆ ಖಾನಾಪುರ ತಾಲೂಕಿನ ತೋಪಿನಕಟ್ಟಿ ಗ್ರಾಮದಲ್ಲಿ ನಡೆದಿದೆ.
ಈ ಹಿನ್ನೆಲೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಗುರುವಾರ ರಾತ್ರಿ ಎರಡು ಗುಂಪುಗಳ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು, ಶುಕ್ರವಾರ ಎರಡು ಗುಂಪುಗಳ ನಡುವೆ ಶಾಸಕ ವಿಠ್ಠಲ ಹಲಗೇಕರ್ ಸಂಧಾನ ಸಭೆ ನಡೆಸಿದರು. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರು. ಹೀಗಾಗಿ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮತ್ತು ಖಾನಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಸದ್ಯ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಮೊಕ್ಕಾಂ ಹೂಡಿದ್ದಾರೆ.
ಘಟನೆ ಕುರಿತು ದಲಿತ ಸಂಘರ್ಷ ಸಮಿತಿ ಮುಖಂಡ ರಾಜಶೇಖರ ಮಾತನಾಡಿ, ನಮ್ಮ ಸಮಾಜದ ಯುವಕರ ಮೇಲೆ ಕೆಲವು ಯುವಕರು ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ನೂರಾರು ಜನರು ಸೇರಿಕೊಂಡು ಕಲ್ಲು ತೂರಾಟ ಕೂಡ ಮಾಡಿದ್ದಾರೆ ಎಂದು ಆರೋಪಿಸಿದರು.
Laxmi News 24×7