Breaking News

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಯಾವುದೇ ತೊಂದರೆ ಇಲ್ಲ: ಸಚಿವ ಪರಮೇಶ್ವರ್

Spread the love

ಬೆಂಗಳೂರು: ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ನಾವು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಶೇ.45ರಷ್ಟು ಮತ ಪ್ರಮಾಣ ಗಳಿಸಿದ್ದೆವು. ಅದನ್ನು ಲೋಕಸಭೆ ಚುನಾವಣೆಯಲ್ಲೂ ಉಳಿಸುವ ಸಾಧ್ಯತೆ ಇದೆ. ಅದರಿಂದ ನಮಗೇನು ತೊಂದರೆ ಆಗಲ್ಲ. ಅವರು ಮೈತ್ರಿ ಮಾಡಿಕೊಳ್ಳಲಿ. ನಾವು 2019ರಲ್ಲಿ ಅವರ ಜೊತೆ ಮೈತ್ರಿ ಕೊಂಡಿದ್ದೆವು. ಆಗ ಐದು ಸ್ಥಾನವನ್ನು ಜೆಡಿಎಸ್​​ಗೆ ಬಿಟ್ಟು ಕೊಟ್ಟಿದ್ದೆವು. ಆದರೆ ಅಂತಿಮವಾಗಿ ಫಲಿತಾಂಶ ಏನು ಬಂದಿದೆ ಎಂದು ಗೊತ್ತಿದೆ ಎಂದರು.

ಆ ಸಂದರ್ಭ ಮೈತ್ರಿ ಮಾಡಿಕೊಂಡಿದ್ದನ್ನು ಕಾಂಗ್ರೆಸ್ ಕಾರ್ಯಕರ್ತರು ಒಪ್ಪಿರಲಿಲ್ಲ. ಹೈ ಕಮಾಂಡ್ ತೀರ್ಮಾನ ಅಂತ ನಾವೆಲ್ಲ ಒಪ್ಪಿಕೊಂಡೆವು. ಈಗ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದೆ. ಅದರಿಂದ ನಮಗೇನು ಸಮಸ್ಯೆ ಆಗಲ್ಲ. ನೀವು ಜಾತ್ಯಾತೀತ ಜನತಾದಳ ಅಂತ ಹಾಕಿದ್ದೀರ. ಈಗ ಯಾವ ಜಾತ್ಯಾತೀತ ಅಂತ ಜನ ಕೇಳ್ತಾರೆ. ಉತ್ತರವನ್ನು ಅವರು ಕೊಡ್ತಾರೆ ಅಂತ ಅಂದುಕೊಳ್ಳುತ್ತೇನೆ ಎಂದು ಟೀಕಿಸಿದರು.

 


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ