ಬೆಂಗಳೂರು: ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದ ಏಳು ಜನ ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ.
ಆರೋಪಿಗಳಾದ ಚೈತ್ರಾ ಕುಂದಾಪುರ, ಗಗನ್, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಹಾಗೂ ಚೆನ್ನನಾಯ್ಕ್ರನ್ನು ಇಂದು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾಗಿದೆ. ಮಧ್ಯಾಹ್ನದ ವೇಳೆಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಸಿಸಿಬಿ ಪೊಲೀಸರು ಅಗತ್ಯವಿದ್ದಲ್ಲಿ ಮಾತ್ರ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ. ವಂಚನೆ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧನವಾಗಿದ್ದ ಚೈತ್ರಾ ಸೇರಿದಂತೆ ಏಳು ಜನ ಆರೋಪಿಗಳ ತಂಡವನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಸೆಪ್ಟೆಂಬರ್ 13 ರಂದು ನಗರದ 1ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿತ್ತು.
Laxmi News 24×7