Breaking News

ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಕಂಡಕ್ಟರ್​ ಸೇರಿ 15ಕ್ಕೂ ಹೆಚ್ಚು ಜನರಿಗೆ ಗಾಯ

Spread the love

ರಾಯಚೂರು: ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ‌ಬಸ್ ಕಂಡಕ್ಟರ್​ ಸೇರಿದಂತೆ 15ಕ್ಕೂ ಪ್ರಯಾಣಿಕರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿ ಶನಿವಾರ ನಡೆದಿದೆ.

 

ಬಸ್ ಸಿಂಧನೂರಿನಿಂದ ಅಂಕಲಿಮಠಕ್ಕೆ ಕಡೆಗೆ ಹೋಗುವಾಗ ಮಾರ್ಗದ ಮಧ್ಯದಲ್ಲಿ ಈ ದುರ್ಘಟನೆ ನಡೆದಿದೆ. ಲಾರಿಯೊಂದು ಪಂಚರ್ ಆಗಿ ರಸ್ತೆ ಪಕ್ಕದಲ್ಲಿ ನಿಂತಿತ್ತು. ಆದರೆ, ರಾತ್ರಿ ವೇಳೆಯಲ್ಲಿ ಲಾರಿ ನಿಲುಗಡೆ ಮಾಡಿರುವುದನ್ನು ಸೂಚಿಸಲು ಇಂಡಿಕೇಟರ್ ಆನ್​ ಮಾಡಿರಲಿಲ್ಲ. ಕತ್ತಲು ಕವಿದಿದ್ದು, ಎದುರುಗಡೆ ಬಂದ ಬೈಕ್ ಅನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.

15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಬ್ಯುಲೆನ್ಸ್ ಸಹಾಯದಿಂದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಹಾಗೂ ಬಳ್ಳಾರಿ, ರಾಯಚೂರು ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಂಧನೂರು ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

 


Spread the love

About Laxminews 24x7

Check Also

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Spread the loveದೆಹಲಿ: ಪರಿಶಿಷ್ಟ ಜಾತಿ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್‌  ಇಂದು (ಮಂಗಳವಾರ) ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಹಿಂದೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ