Breaking News

ಮಹಿಳಾ ಮೀಸಲಾತಿ ಬಿಲ್ ಅನುಷ್ಠಾನ ಆಗುವುದೇ ಅನುಮಾನ: ಸಿದ್ದರಾಮಯ್ಯ

Spread the love

ಬೆಂಗಳೂರು: ಕ್ಷೇತ್ರ ಪುನರ್ ವಿಂಗಡಣೆ, ಜನಗಣತಿಯೆಂಬ ಕೊಕ್ಕೆಯನ್ನಿಟ್ಟು ಪ್ರಕಟಿಸಿರುವ ಮಹಿಳಾ ಮೀಸಲು ಸಂಪೂರ್ಣ ಅನುಷ್ಠಾನ ಸಂಶಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ಮಹಿಳಾ ಮೀಸಲಾತಿ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಜಾರಿ ಮಾಡಿರುವ ಮಹಿಳಾ ಮೀಸಲಾತಿಗೆ ಕ್ಷೇತ್ರ ಪುನರ್ ವಿಂಗಡಣೆ, ಜನಗಣತಿಯನ್ನು ವಿಚಾರವನ್ನು ತಂದಿದ್ದು ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಸಂಶಯ ಎಂದು ಅನುಮಾನ ವ್ಯಕ್ತಪಡಿಸಿದರು.

ಒಂದೊಮ್ಮೆ ಮಹಿಳೆಯರಿಗೆ ಮೀಸಲಾತಿ ಕೊಡಲೇಬೇಕು ಎನ್ನುವ ಪ್ರಾಮಾಣಿಕ ಕಾಳಜಿ ಬಿಜೆಪಿಗೆ ಇದ್ದಿದ್ದರೆ ಇಷ್ಟೊಂದು ಅಡೆ ತಡೆಗಳನ್ನು ಏಕೆ ಹಾಕುತ್ತಿದ್ದರು ಎಂದು ಪ್ರಶ್ನಿಸಿದರು. ನರೇಂದ್ರ ಮೋದಿಯವರು ಜಾರಿ ಮಾಡಿರುವ ಮಹಿಳಾ ಮೀಸಲಾತಿಗೆ ಕೇಂದ್ರ ಸರ್ಕಾರ 15 ವರ್ಷ ಆಯಸ್ಸು ಫಿಕ್ಸ್ ಮಾಡಿದೆ. ಕಾಯ್ದೆ ಜಾರಿಯಾದ ದಿನದಿಂದ 15 ವರ್ಷ ಆಯಸ್ಸು ಇದೆ. ಅಂದರೆ ಈಗ ಕಾಯ್ದೆ ಜಾರಿ ಆಗಿದೆ.

ಇದಕ್ಕೆ ಇನ್ನು 15 ವರ್ಷ ಮಾತ್ರ ಆಯಸ್ಸು. ಆದರೆ, ಜಾತಿ ಜನಗಣತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಎನ್ನುವ ಎರಡು ಕೊಕ್ಕೆ ಹಾಕಿಟ್ಟಿದ್ದಾರೆ. ಇವರೆಡೂ ಮುಗಿಯುವ ವೇಳೆಗೆ 15 ವರ್ಷ ಆಗಿರುತ್ತೆ. ಹೀಗಾಗಿ ಮಹಿಳಾ ಮೀಸಲಾತಿ ಕಾಯ್ದೆಗೆ ಜಾರಿ ಆಗುವ ಮೊದಲೇ ಅದರ ಆಯಸ್ಸೇ ಮುಗಿದು ಹೋಗಿರುತ್ತದೆ. ಇದು ಮಹಿಳೆಯರಿಗೆ ಮಾಡಿರುವ ಪರಮ ವಂಚನೆ ಎಂದು ಟೀಕಿಸಿದರು.

ಮಹಿಳಾ ಮೀಸಲಾತಿ ಜಾರಿ ಮಾಡುವುದಕ್ಕೆ ದೇವರೇ ನನ್ನನ್ನು ಕಳುಹಿಸಿದ್ದು ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಮೊನ್ನೆ ಹೇಳಿದರು. ಈಗ ನೋಡಿದರೆ ಈ ರೀತಿ ವಂಚನೆ ಮಹಿಳೆಯರಿಗೆ ಆಗಿದೆ. ಮಹಿಳೆಯರಿಗೆ ವಂಚನೆ ಮಾಡಿ ಅಂತನಾ ದೇವರು ನಿಮ್ಮನ್ನು ಕಳುಹಿಸಿದ್ದು ಎಂದು ಸಿದ್ದರಾಮಯ್ಯ ವ್ಯಂಗ್ಯವಾಗಿ ಪ್ರಧಾನಿ ಅವರನ್ನು ಪ್ರಶ್ನಿಸಿದರು.

ಮಹಿಳಾ ಮೀಸಲಾತಿ ಬಿಲ್ ಸಿದ್ಧಪಡಿಸಿದ್ದು ಕಾಂಗ್ರೆಸ್. ಕಾಂಗ್ರೆಸ್ ಯಾವತ್ತೂ ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿದೆ. ಮಹಿಳಾ ಮೀಸಲಾತಿಯಲ್ಲೂ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮೀಸಲಾತಿ ಇರಬೇಕು ಎನ್ನುವುದಕ್ಕೆ ನನ್ನ ಪೂರ್ಣ ಬೆಂಬಲ ಇದೆ. ಅದರಲ್ಲೂ ಶೇ. 33 ಮಾತ್ರವಲ್ಲ, ಶೇ.50 ರಷ್ಟು ಮೀಸಲಾತಿಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದರು.

ಪ್ರಸ್ತುತ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024 ರಲ್ಲೂ ಜಾರಿ ಆಗುವುದಿಲ್ಲ. 2029 ರಲ್ಲೂ ಜಾರಿ ಆಗುವುದಿಲ್ಲ. 2034 ರಲ್ಲೂ ಜಾರಿ ಆಗುವುದಿಲ್ಲ. ಅಷ್ಟೊತ್ತಿಗೆ ಕಾಯ್ದೆಯ ಆಯಸ್ಸೇ ಮುಗಿದಿರುತ್ತದೆ ಎಂದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ