Breaking News

ಬೆಂಗಳೂರಲ್ಲಿ ಆಟೋ ಚಾಲಕರ ವಿರುದ್ಧ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು 3.36 ಲಕ್ಷ ರೂ ದಂಡ ವಿಧಿಸಿದ್ದಾರೆ.

Spread the love

ಬೆಂಗಳೂರು: ನಗರದಲ್ಲಿ ಆಟೋ ಚಾಲಕರ ವಿರುದ್ಧ ಪ್ರಯಾಣಿಕರಿಂದ ಪದೇ ಪದೇ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆಗಿಳಿದಿದ್ದರು.

ಈ ಮೂಲಕ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ. ಸೆ.14ರಿಂದ 23ರವರೆಗೆ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 670 ಪ್ರಕರಣ ದಾಖಲಿಸಿಕೊಂಡು, 3.36 ಲಕ್ಷ ರೂ ದಂಡ ವಸೂಲಿ ಮಾಡಿದ್ದಾರೆ.

ಹೆಚ್ಚು ಹಣ ವಸೂಲಿ ಮಾಡುವ ಚಾಲಕರಿಗೆ ದಂಡ: ಪ್ರಯಾಣಿಕರಿಂದ ಹೆಚ್ಚಿನ ದರ ಪಡೆಯುತ್ತಿದ್ದ ಆಟೋ ಚಾಲಕರಿಗೆ ಪೊಲೀಸರು ದಂಡದ ಬರೆ ಎಳೆದಿದ್ದಾರೆ. ಈಶಾನ್ಯ ಉಪ ವಿಭಾಗದಲ್ಲಿಹೆಚ್ಚು ಹಣ ಪಡೆದ ಆರೋಪದಡಿ ಒಟ್ಟು 141 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, 72,000 ರೂ ದಂಡ ಹಾಕಲಾಗಿದೆ. ಉತ್ತರ ಉಪ ವಿಭಾಗದಲ್ಲಿ 213 ಆಟೋ ಚಾಲಕರ ವಿರುದ್ಧ ಕೇಸ್ ದಾಖಲಿಸಿ, 1.06 ಲಕ್ಷ ರೂ ದಂಡ ಸಂಗ್ರಹಿಸಲಾಗಿದೆ.

ಪ್ರಯಾಣಿಕರು ಕರೆದ ಕಡೆ ಬಾರದ ಚಾಲಕರ ವಿರುದ್ಧ ಕ್ರಮ: ಈಶಾನ್ಯ ಉಪ ವಿಭಾಗದಲ್ಲಿ ಪ್ರಯಾಣಿಕರು ಕರೆದ ಕಡೆ ಬರದ 95 ಆಟೋ ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು 47,500 ರೂ ದಂಡ ವಿಧಿಸಲಾಗಿದೆ. ಉತ್ತರ ಉಪ ವಿಭಾಗದಲ್ಲಿ ಪ್ರಯಾಣಿಕರು ಕರೆದ ಕಡೆ ಬರದ 221 ಆಟೋ ಚಾಲಕರ ಮೇಲೆ ಪ್ರಕರಣ ದಾಖಲಿಸಿ, 1.10 ಲಕ್ಷ ದಂಡ ವಿಧಿಸಲಾಗಿದೆ.

10 ದಿನಗಳ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 670 ಪ್ರಕರಣ ದಾಖಲಿಸಿಕೊಂಡು 3.36 ಲಕ್ಷ ರೂ ದಂಡ ವಿಧಿಸಲಾಗಿದೆ ಎಂದು ಸಂಚಾರಿ ಉತ್ತರ ವಿಭಾಗದ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ