Breaking News

ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಇಬ್ಬರ ಸ್ಥಿತಿ ಹೇಳಲು ಹೆಸರಿಲ್ಲದಂತಾಗುತ್ತೆ.:ಈಶ್ವರ್ ಖಂಡ್ರೆ

Spread the love

ಚಿಕ್ಕಮಗಳೂರು : ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಇಬ್ಬರ ಸ್ಥಿತಿ ಹೇಳಲು ಹೆಸರಿಲ್ಲದಂತಾಗುತ್ತೆ.

ಮುಂದಿನ ದಿನಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಸಿಗೆ ಯಾವುದೇ ನಷ್ಟವಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ – ಜೆಡಿಎಸ್ ಹೊಟ್ಟೆಕಿಚ್ಚಿನಿಂದ ಕೈ-ಕೈ ಹಿಸುಕಿಕೊಳ್ತಿವೆ. ಅವರಿಗೆ ತಮ್ಮ ಅಸ್ತಿತ್ವವೇ ಹೋಗುತ್ತೆ, ಕಾಂಗ್ರೆಸ್ ಮುಂದೆ ನಾವು ಏನು ಇರಲ್ಲ ಅನ್ನಿಸಿದೆ. ಯಾವುದೇ ಕೆಲಸ ಇಲ್ಲದ ಕಾರಣ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರ ಮಾತುಗಳಲ್ಲಿ ಹುರುಳಿಲ್ಲ, ಕಾಂಗ್ರೆಸ್​ ಸರ್ಕಾರಕ್ಕೆ ಅವರಿಂದ ಯಾವ ನಷ್ಟವೂ ಇಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಸವಾಲು ಹಾಕಿದರು.

ಗ್ಯಾರಂಟಿಯಿಂದ ಕಾಂಗ್ರೆಸ್ ಪೂರ್ಣ ಬಹುಮತದ ಸರ್ಕಾರ ಬಂದಿದೆ. ಕೊಟ್ಟ ಮಾತನ್ನು ಉಳಿಸಿಕೊಂಡು ಪಾರದರ್ಶಕ ಆಡಳಿತ ನೀಡುತ್ತಿದ್ದೇವೆ. ಬಿಜೆಪಿ – ಜೆಡಿಎಸ್ ಕಾಂಗ್ರೆಸ್ ಜನಪ್ರಿಯತೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾವೇರಿ ನದಿ ನೀರು ವಿವಾದದ ಬಗ್ಗೆ ಮಾತನಾಡಿದ ಅವರು ರಾಜ್ಯದ ನೆಲ ಜಲ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಆ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಕಾವೇರಿ ನೀರು ಬಳಕೆ ಮಾಡುವುದು ನಮ್ಮ ಹಕ್ಕು. ನಮ್ಮ ರೈತರ ಅನುಕೂಲಕ್ಕಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ತಜ್ಞರು, ಹಿರಿಯರ ಜೊತೆ ನಿರಂತರ ಚರ್ಚೆ ನಡೆಯುತ್ತಿದೆ. ಸರ್ವ ಪಕ್ಷ ಸಭೆ ಕರೆದು ಕೂಡ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

ಕಾವೇರಿ ನೀರು ವಿವಾದವನ್ನು ಕೇಂದ್ರದ ಗಮನಕ್ಕೆ ತಂದು ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸಲಿದ್ದೇವೆ. ನಮ್ಮ ರಾಜ್ಯಕ್ಕೆ ಆ ಭಾಗದ ರೈತರು, ಜನರಿಗೆ ಆನ್ಯಾಯವಾಗದಂತ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಈಶ್ವರ್​ ಖಂಡ್ರೆ ಭರವಸೆ ನೀಡಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ