Breaking News

ಸೆ.26 ರಂದು ಶಾಂತಿಯುತವಾಗಿ ಬೆಂಗಳೂರು ಬಂದ್

Spread the love

ಬೆಂಗಳೂರು : ಕಾವೇರಿ ನದಿ ವಿಚಾರವಾಗಿ ಸೆ.26ರಂದು ಬೆಳಗ್ಗೆ 6ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಾಂತಿಯುತವಾಗಿ ಬಂದ್‌ ನಡೆಸುತ್ತೇವೆ. ನಗರದ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್​ವರೆಗೆ ಮೆರವಣಿಗೆ ಮೂಲಕ ಸಾಗಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

 

ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶವನ್ನು ಖಂಡಿಸಿ ಸೆ.26ರಂದು ಕರೆ ನೀಡಲಾಗಿರುವ ಬೆಂಗಳೂರು ಬಂದ್‌ ವಿಚಾರವಾಗಿ ಮುಖ್ಯಮಂತ್ರಿ ಚಂದ್ರು ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಭಾನುವಾರ ಮಾಧ್ಯಮಗೋಷ್ಟಿ ನಡೆಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು. ಕೂಡಲೇ ರಾಜ್ಯ ಸರ್ಕಾರ ವಿಧಾನಸಭೆ ಅಧಿವೇಶನ ಕರೆದು ಚರ್ಚಿಸಿ, ಸಂಕಷ್ಟ ಸೂತ್ರ ಜಾರಿ ಮಾಡುವ ತನಕ ನೀರು ಬಿಡುವುದಿಲ್ಲ ಎಂಬ ಎಚ್ಚರಿಕೆಯನ್ನು ಕೇಂದ್ರ ಸರ್ಕಾರ ಮತ್ತು ಕಾವೇರಿ ನೀರು ನಿರ್ವಹಣಾ ಮಂಡಳಿಗೆ ನೀಡಬೇಕು. ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ಕೂಡಲೇ ರದ್ದು ಪಡಿಸಿ, ಸ್ವತಂತ್ರ ನೀರು ನಿರ್ವಹಣಾ ಮಂಡಳಿ ರಚಿಸಬೇಕು. ಈ ಮಂಡಳಿಯಲ್ಲಿ ನಾಲ್ಕು ರಾಜ್ಯಗಳ ರೈತ ಪ್ರತಿನಿಧಿಗಳು ಮತ್ತು ಎಲ್ಲರನ್ನು ಒಳಗೊಂಡಂತೆ ಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಬೆಂಗಳೂರು ಬಂದ್‌ ಕುರಿತಾಗಿ ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್‌ ಅವರ ಹೇಳಿಕೆಯನ್ನು ಖಂಡಿಸಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ನಾವು ಆಯ್ಕೆ ಮಾಡಿದಂತ ಸರ್ಕಾರ ನಮ್ಮ ಪರವಾಗಿ ಕೆಲಸ ಮಾಡಬೇಕು. ಆದರೆ ನಮ್ಮ ಸರ್ಕಾರದ ನೀರಾವರಿ ಸಚಿವರು ನಮ್ಮ ಬಂದ್‌ ಬಗ್ಗೆ ಬಹಳ ಲಘುವಾಗಿ ಮಾತನಾಡುತ್ತಾರೆ. ಬೆಂಗಳೂರಿಗೆ ಅಗೌರವ ತರುತ್ತಿದ್ದೇವೆಂದು ದೂರುತ್ತಿದ್ದಾರೆ. ಇದು ಅವರ ಅಧಿಕಾರದ ಘನತೆಗೆ ತಕ್ಕಂತಹ ಮಾತಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ