Breaking News

ಚುನಾವಣೆ ವೇಳೆ ಕುಕ್ಕರ್ ಹಂಚಿಕೆ ಕುರಿತ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಪೊಲೀಸರಿಗೆ ದೂರು

Spread the love

ಮೈಸೂರು: ಚುನಾವಣೆ ಸಂದರ್ಭದಲ್ಲಿ ಕುಕ್ಕರ್ ಹಾಗೂ ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಿರುವ ಸಂಬಂಧ ಮಾಜಿ ಶಾಸಕ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರೂ ಆಗಿರುವ ಯತಿಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯ ಸಮಗ್ರ ತನಿಖೆ ನಡೆಸುವಂತೆ ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಘಟಕ ಹಾಗೂ ಬಿಜೆಪಿ ಮುಖಂಡರಾದ ಭಾಸ್ಕರ್ ರಾವ್ ಅವರು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಡಿವಾಳ ಸಮುದಾಯದ ಸಾವಿರಾರು ಜನರಿಗೆ ನನ್ನ ತಂದೆ ಸಿದ್ದರಾಮಯ್ಯ ಅವರ ಕಡೆಯಿಂದ ಮಡಿವಾಳ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪನವರು, ಸಾವಿರಾರು ಕುಕ್ಕರ್ ಹಾಗೂ ಐರನ್ ಬಾಕ್ಸ್ ಹಂಚಿಕೆ ಮಾಡಿದ್ದಾರೆ ಎಂಬ ಬಗ್ಗೆ ನಂಜನಗೂಡಿನ ಮಡಿವಾಳ ಸಮುದಾಯದ ಕೃತಜ್ಞತಾ ಸಭೆಯಲ್ಲಿ ಯತೀಂದ್ರ ಬಹಿರಂಗ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಭಾನುವಾರ ಸಂಜೆ ನಂಜನಗೂಡಿನ ಪಟ್ಟಣ ಪೊಲೀಸ್ ಠಾಣೆಯಲ್ಲಿ ಗ್ರಾಮಾಂತರ ಬಿಜೆಪಿ ಪರವಾಗಿ ಎ.ಎನ್.ರಂಗು ಎಂಬವರ ಮೂಲಕ ದೂರು ನೀಡಲಾಗಿದೆ.

ಇದೇ ಸಂದರ್ಭದಲ್ಲಿ ಭಾಸ್ಕರ್ ರಾವ್ ಮಾತನಾಡಿ, ಸೆಪ್ಟೆಂಬರ್ 15 ರ ಶುಕ್ರವಾರ ನಂಜನಗೂಡಿನ ಮಡಿವಾಳ ಸಮುದಾಯ ಭವನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಪುತ್ರ ಯತಿಂದ್ರ ಸಿದ್ದರಾಮಯ್ಯ ಮಾತನಾಡಿ ವರುಣ ಕ್ಷೇತ್ರದ ವ್ಯಾಪ್ತಿಯಲ್ಲಿ ನಮ್ಮ ತಂದೆಯ ಗೆಲುವಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸಾವಿರಾರು ಜನರಿಗೆ ಕುಕ್ಕರ್ ಹಾಗೂ ಇಸ್ತ್ರಿ ಪೆಟ್ಟಿಗೆ ವಿತರಿಸಿದರು ಎಂಬ ಹೇಳಿಕೆಯ ಬಗ್ಗೆ ತನಿಖೆ ಮಾಡಬೇಕು. ಆ ದೃಷ್ಟಿಯಿಂದ ದೂರು ದಾಖಲು ಮಾಡಲಾಗಿದೆ. ಚುನಾವಣಾ ಸಂದರ್ಭದಲ್ಲಿ ಈ ರೀತಿ ಆಮಿಷ ತೋರಿಸುವುದು ಅಪರಾಧ. ಈ ಬಗ್ಗೆ ತನಿಖೆ ನಡೆಸಬೇಕೆಂಬ ಉದ್ದೇಶದಿಂದ ದೂರು ದಾಖಲು ಮಾಡಲಾಗಿದೆ ಎಂದರು.

 


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ