ರಾಜ್ಯದ ಪ್ರಸಕ್ತ ವಿದ್ಯಮಾನದ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಡಿಜಿಟಲ್ ಫಾಲೋ ಮಾಡಿ.ಮುಂಗಾರು ಮಳೆ ಕೈ ಕೊಟ್ಟು ಸರಿಯಾದ ಸಮಯಕ್ಕೆ ಮಳೆ ಆಗದೆ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಇದರ ನಡುವೆ ತಮಿಳು ನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಹೀಗಾಗಿ ರಾಜ್ಯದೆಲ್ಲೆಡೆ ರೈತರು ಸೇರಿದಂತೆ ಅನೇಕ ಸಂಘಟನೆಗಳು ಪ್ರತಿಭಟನೆ ಮಾಡುತ್ತೇವೆ.
ಬಂದ್ಗೆ ಕರೆಕೊಟ್ಟಿವೆ. ಸೆ.25 ಮತ್ತು 26ರಂದು ಅನೇಕ ಕಡೆ ಬಂದ್ಗೆ ಕರೆ ಕೊಡಲಾಗಿದೆ. ಇನ್ನೂ ಮತ್ತೊಂದೆಡೆ ಕರ್ನಾಟಕ ಬಂದ್ ಮಾಡಲು ಚರ್ಚೆಗಳು ನಡೆಯುತ್ತಿವೆ. ಮತ್ತೊಂದೆಡೆ ಬಿಜೆಪಿ ಜೆಡಿಎಸ್ ಮೈತ್ರಿ ಹಿನ್ನೆಲೆ ದೊಡ್ಡ ಮಟ್ಟದ ಪಕ್ಷಾಂತರ ಪರ್ವ ಶುರುವಾಗುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ಮೈತ್ರಿಯ ಪರಿಣಾಮ ಹಲವು ಮಂದಿ ಕಾಂಗ್ರೆಸ್ ಕಡೆ ಮುಖ ಮಾಡುವ ನಿರೀಕ್ಷೆ ಇದೆ. ಕಾಂಗ್ರೆಸ್ ಕಡೆಗೆ ಕೆಲವು ಮಾಜಿ, ಹಾಲಿ ಶಾಸಕರು ಮುಖ ಮಾಡುವ ಸಾಧ್ಯತೆ ಇದ್ದು ಸೂಕ್ತ ಸಂದರ್ಭ ಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಎಲ್ಲದರ ಕ್ಷಣಕ್ಷಣದ ಮಾಹಿತಿ ಟಿವಿ9 ಲೈವ್ನಲ್ಲಿ ಪಡೆಯಿರಿ.