ಅರ್ಜಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಮಾಜಿ ಪಿಎಂ ಎಚ್.ಡಿ ದೇವೇಗೌಡ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಮಳೆ ಇಲ್ಲದೇ ರೈತರು ಪರದಾಡುತ್ತಿದ್ದಾರೆ. ಇದರ ಮಧ್ಯೆ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿದೆ.
ಇದರಿಂದ ಕಾವೇರಿ ಭಾಗದ ಜನ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಕಾವೇರಿ ಕಿಚ್ಚು ಜೋರಾಗಿದೆ. ಇನ್ನು ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಕಾವೇರಿ ನದಿ ನೀರು ವಿವಾದದವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಮನವಿ ಮಾಡಿದ್ದಾರೆ.