Breaking News

ಮಳೆ ಇಲ್ಲದೆ ರೈತರು ಕಂಗಾಲು: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲಿ: ಪಿಎಂ ಗೆ ಎಚ್.ಡಿ ದೇವೇಗೌಡ ಪತ್ರ

Spread the love

ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಬೇಕು. ಅರ್ಜಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು . ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಬೇಕು.

ಅರ್ಜಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಮಾಜಿ ಪಿಎಂ ಎಚ್.ಡಿ ದೇವೇಗೌಡ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಮಳೆ ಇಲ್ಲದೇ ರೈತರು ಪರದಾಡುತ್ತಿದ್ದಾರೆ. ಇದರ ಮಧ್ಯೆ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್​ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿದೆ.

ಇದರಿಂದ ಕಾವೇರಿ ಭಾಗದ ಜನ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಕಾವೇರಿ ಕಿಚ್ಚು ಜೋರಾಗಿದೆ. ಇನ್ನು ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಕಾವೇರಿ ನದಿ ನೀರು ವಿವಾದದವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ

Spread the loveಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ