Breaking News

ಬೆಳಗಾವಿ ಮತ್ತು ಖಾನಾಪುರವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ ಅನ್ನದಾತರ ಪ್ರತಿಭಟನೆ

Spread the love

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಅನ್ನದಾತರು ಸಂಕಷ್ಟದಲ್ಲಿದ್ದಾರೆ. ಮಳೆ ಅಭಾವದಿಂದ ಸಾಲ ಸೂಲ ಮಾಡಿ ಬೆಳೆ ಬಿತ್ತಿದ್ದ ರೈತರು ಕಂಗಾಲಾಗಿದ್ದಾರೆ. ಇನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈ ಬಿಟ್ಟಿರುವ ಬೆಳಗಾವಿ ಮತ್ತು ಖಾನಾಪುರವನ್ನು ಪಟ್ಟಿಗೆ ಸೇರಿಸಿ, ಬೆಳೆ ಹಾನಿಗೆ ಸೂಕ್ತ ಪರಿಹಾರ ಘೋಷಿಸುವಂತೆ ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದಿಂದ ಪ್ರತಿಭಟನೆ ನಡೆಯಿತು.

ಹಾಳಾದ ಭತ್ತ, ಆಲೂಗಡ್ಡೆ, ಗೆಣಸು ಸೇರಿ ಇನ್ನಿತರ ಬೆಳೆಗಳನ್ನು ಕೈಯಲ್ಲಿ ಹಿಡಿದುಕೊಂಡು ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದರು. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಜಿಲ್ಲೆಯ ಎರಡು ತಾಲೂಕು ಕೈ ಬಿಟ್ಟಿರುವ ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆಗಮಿಸಿ ರೈತ ಮುಖಂಡರ ಸಮಸ್ಯೆ ಆಲಿಸಿದರು. ಕೂಡಲೇ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು. ಅಲ್ಲಿಯವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ನೇಗಿಲಯೋಗಿ ರೈತ ಸೇವಾ ಸಂಘದ ರಾಜ್ಯಾಧ್ಯಕ್ಷ ರವಿ ಪಾಟೀಲ ಮಾತನಾಡಿ, ಎನ್​ಡಿಆರ್​ಎಫ್ ಕಾಯಿದೆ ಪ್ರಕಾರ ರೈತರು 1 ಲಕ್ಷ ರೂ. ಖರ್ಚು ಮಾಡಿದರೆ, ಶೇ.60ರಷ್ಟು ಪರಿಹಾರ ನೀಡಬೇಕೆಂದು ನಿಯಮವಿದೆ. ಆದರೆ, ತಹಶೀಲ್ದಾರ್ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಸಿ ಅವರಿಗೆ ವರದಿ ನೀಡಬೇಕಿತ್ತು. ಆ ಕೆಲಸವನ್ನು ಇವರು ಮಾಡಿಲ್ಲ. ಹಾಗಾಗಿ ಜನಪ್ರತಿನಿಧಿಗಳು ಹಾನಿಗೊಳಗಾದ ರೈತರಿಗೆ ಯೋಗ್ಯ ಪರಿಹಾರ ನೀಡಿ, ಲೋಕಸಭೆ ಚುನಾವಣೆಗೆ ಮತ ಕೇಳಲು ನಮ್ಮ ಮನೆಗೆ ಬರಬೇಕು ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ