Breaking News

ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ಅಭೂತ ಪೂರ್ವ ಸ್ಪಂದನೆ

Spread the love

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಾಶ್ ಹುಕ್ಕೇರಿ ಹೇಳಿದರು.

ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ನಡೆದ ಜನತಾ ದರ್ಶನಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ವೇದಿಕೆಗೆ ಆಗಮಿಸಿ ಅಹವಾಲುಗಳನ್ನು ಸಲ್ಲಿಸಿದರು. ಇದಲ್ಲದೇ ಸಭಾಭವನದಲ್ಲಿ ಸ್ಥಾಪಿಸಲಾಗಿದ್ದು ಎಂಟು ಕೌಂಟರ್ ಗಳಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.

ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತವು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದಾಗ್ಯೂ ಜನರ ಅಲೆದಾಟವನ್ನು ತಪ್ಪಿಸುವುದಕ್ಕಾಗಿ ಮುಖ್ಯಮಂತ್ರಿಗಳ ಆಶಯದಂತೆ ಜನತಾದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಆಸಿಫ್ (ರಾಜು) ಸೇಠ್, ಜನರು ಜನತಾ ದರ್ಶನದಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಿಕೊಳ್ಳುವುದು ಸಾಧ್ಯವಾಗಲಿದೆ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಲಭ್ಯವಾಗುವುದರಿಂದ ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು

ಜಿಲ್ಲಾಧಿಕಾರಿ ಮಾತನಾಡಿ ನಿತೇಶ್ ಪಾಟೀಲ, ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ಹದಿನೈದು ದಿನಗಳಿಗೊಮ್ಮೆ ತಾಲ್ಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನತಾ ದರ್ಶನ ನಡೆಸಲಾಗುವುದು.ಜನರ ಅಹವಾಲುಗಳನ್ನು ಸ್ಥಳೀಯವಾಗಿಯೇ ಪರಿಹರಿಸುವುದು ಜನತಾ ದರ್ಶನದ ಉದ್ಧೇಶವಾಗಿದೆ. ಜನರ ಅಹವಾಲು ಸ್ವೀಕರಿಸಲು ಎಂಟು ಕೌಂಟರ್ ಗಳನ್ನು ಆರಂಭಿಸಲಾಗಿದೆ.

ಇಲ್ಲಿ ಸ್ವೀಕೃತವಾಗುವ ಅರ್ಜಿಗಳು ಐಪಿಜಿಆರ್ ಎಸ್ ಪೋರ್ಟಲ್ ನಲ್ಲಿ ದಾಖಲಿಸಲಾಗುತ್ತದೆ. ಜಲ್ಲಾಮಟ್ಟದಲ್ಲಿ ಬಗೆಹರಿಸಬಹುದಾದ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡಲಾಗುವುದು. ರಾಜ್ಯ ಸರಕಾರದ ಹಂತದಲ್ಲಿ ಬಗೆಹರಿಸಬಹುದಾದ ಅರ್ಜಿಗಳನ್ನು ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಅಪರ ಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಡಿಸಿಪಿ ರೋಹನ ಜಗದೀಶ್, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ, ಐಎಎಸ್ ಪ್ರೊಬೇಷನರಿ ಅಧಿಕಾರಿ ಶುಭಂ ಶುಕ್ಲಾ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ