ಗೋಕಾಕ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ.
ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಂದು ಸಂಜೆ ಇಬ್ಬರು ಯೋಧರ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ ನಡೆದಿತ್ತು ಎನ್ನಲಾಗಿದೆ.
ಅವರಿಬ್ಬರ ಜಗಳ ವಿಕೋಪಕ್ಕೆ ತಿರುಗಿ ಯೋಧರೊಬ್ಬರು ಮತ್ತೊಬ್ಬ ಯೋಧನ ಮೇಲೆ ಡಬಲ್ ರಿವಾಲ್ವಾರ ಗನ್ ನಿಂದ ಪೈರ್ ಮಾಡಿದ್ದಾರೆ.
ಪೈರಿಂಗ್ ಮಾಡಿದ ಆರೋಪಿ ಯೋಧನನ್ನು ನಂಜುಂಡಿ ಲಕ್ಷ್ಮಣ ಬೂದಿಹಾಳ (32) ಎಂದು ಹೇಳಲಾಗುತ್ತಿದೆ.
ಇನ್ನು ಬಸಪ್ಪ ಮೈಲಪ್ಪ ಬಂಬರಗಾ (32) ಎನ್ನುವ ಯೋಧನಿಗೆ ಹೊಟ್ಟೆಗೆ ಗುಂಡು ತಗುಲಿದ್ದರಿಂದ ತೀವ್ರ ಗಾಯಗೊಂಡಿದ್ದಾರೆ.
ಗಾಯಗೊಂಡ ಯೋಧನನ್ನು ತಕ್ಷಣ ಅಕ್ಕತಂಗಿಯರಹಾಳದ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತ್ರ ಬೆಳಗಾವಿಗೆ ಸ್ಥಳಾಂತರ ಮಾಡಲಾಗಿದೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಯೋಧನನ್ನು ಅಂಕಲಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಭೀಮಾಶಂಕರ ಗುಳೇದ ಅಂಕಲಗಿ ಪೋಲಿಸ್ ಭೇಟಿ ನೀಡಿದ್ದಾರೆ.
Laxmi News 24×7