Breaking News

ಇಡೀ ವಿಶ್ವವೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಡೆ ತಿರುಗಿ ನೋಡುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Spread the love

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಣ್ಣ ಖಾತೆಯಲ್ಲ.

ಈ ಮೊದಲು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ಅದರತ್ತ ತಿರುಗಿ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು. ಬೆಳಗಾವಿಯಲ್ಲಿಂದು ಪೋಷಣ್​ ಅಭಿಯಾನ ಮಾಸಾಚರಣೆ ಮತ್ತು ಇಲಾಖೆಯ ವಿವಿಧ ನೂತನ ಸಂಸ್ಥೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಭಾಯಿಸುವ ಭಾಗ್ಯ ನನಗೆ ಸಿಕ್ಕಿದೆ. ನಿಜವಾಗಿಯೂ ಪುಣ್ಯದ ಕೆಲಸ ಇದು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಂದಾಗಿ ಇಂತಹ ಅವಕಾಶ ನನಗೆ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯಿಂದಾಗಿ ಈ ಇಲಾಖೆಯ ಕಡೆಗೆ ವಿಶ್ವವೇ ನೋಡುವಂತಾಗಿದೆ ಎಂದರು.

ಹಳ್ಳಿಯಲ್ಲಿ ಹುಟ್ಟಿ, ಸರ್ಕಾರಿ ಬಸ್​ಗಳಲ್ಲಿ ಓಡಾಡಿ, ಸರ್ಕಾರಿ ಶಾಲೆಯಲ್ಲಿ ಕಲಿತು ಇಂದು ಈ ಮಟ್ಟಕ್ಕೆ ಬಂದು ನಿಂತಿದ್ದೇನೆ. ನಾನು 3ನೇ ತರಗತಿಯಲ್ಲಿರುವಾಗಲೇ ವೈದ್ಯೆಯಾಗುವ ಕನಸು ಕಟ್ಟಿಕೊಂಡಿದ್ದೆ. ಆದರೆ ಈಗ ಮಂತ್ರಿಯಾಗಿ ಇಂತಹ ದೊಡ್ಡ ಯೋಜನೆ ನಿರ್ವಹಿಸುವ, ನಿಮ್ಮೆಲ್ಲರ ಸೇವೆ ಮಾಡುವ ಭಾಗ್ಯ ನನ್ನದಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್​ ಸಂತಸ ವ್ಯಕ್ತಪಡಿಸಿದರು.

 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿಯರ ಸೀಮಂತ ಕಾರ್ಯಕ್ರಮಮಹಿಳೆಯರು ಈ ಮೊದಲು ಸಣ್ಣ ಪುಟ್ಟದ್ದಕ್ಕೂ ಮಾವನ ಮುಂದೆ, ಗಂಡನ ಮುಂದೆ ಕೈ ಚಾಚುವ ಪರಿಸ್ಥಿತಿ ಇತ್ತು. ಸಿದ್ದರಾಮಯ್ಯ ಸರ್ಕಾರ ಬಂದ ನಂತರ ಮಹಿಳೆಯರಿಗೆ ಯಜಮಾನಿ ಎಂದು ಕರೆದರು. ಪಂಚ ಗ್ಯಾರಂಟಿ ಮೂಲಕ ಶಕ್ತಿ ತುಂಬಿದರು. ಇಂತಹ ಪುಣ್ಯದ ಕೆಲಸ ಮಾಡುವ ಅವಕಾಶ ನಮಗೆ ಸಿಕ್ಕಿತು. ಅಂಗನವಾಡಿ ಕಾರ್ಯಕರ್ತೆಯರ ಕೆಲಸವನ್ನು ನಾನು ಪೂಜಿಸುತ್ತೇನೆ. ಯಾರದ್ದೋ ಮಕ್ಕಳ ಪಾಲನೆ, ಪೋಷಣೆ ಮಾಡುವ ನಿಮ್ಮ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಪ್ರಶಂಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುತ್ತೇವೆ: ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗೌರವಧನ ಹೆಚ್ಚಿಸುವುದಾಗಿ ಕಾಂಗ್ರೆಸ್ ಪಕ್ಷ ಚುನಾವಣೆಗೂ ಮೊದಲು ಭರವಸೆ ನೀಡಿದೆ. ಇದು ನಮ್ಮ 6ನೇ ಗ್ಯಾರಂಟಿ. ಕೊಟ್ಟ ಭಾಷೆಯನ್ನು ಈಡೇರಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಮಾಡುತ್ತಾರೆ. ನಾನೂ ಬೆನ್ನು ಬಿದ್ದು ಮಾಡಿಸುತ್ತೇನೆ ಎಂದು ಹೆಬ್ಬಾಳ್ಕರ್​ ಭರವಸೆ ನೀಡಿದರು.

ಇದೇ ವೇಳೆ ಗರ್ಭಿಣಿಯರ ಸೀಮಂತ ಕಾರ್ಯಕ್ರಮ, ಮಕ್ಕಳಿಗೆ ಅನ್ನಪ್ರಾಶನ, ದತ್ತು ಸ್ವೀಕಾರ ಕೇಂದ್ರ ಉದ್ಘಾಟನೆ, ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯ ಉದ್ಘಾಟನೆ, ಮಕ್ಕಳ ಸಹಾಯವಾಣಿ ಉದ್ಘಾಟನೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ನೆರವೇರಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ ಆರ್. ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸುನಿತಾ ದೇಸಾಯಿ ನಿರೂಪಿಸಿದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ