Breaking News

ಕ್ಷುಲ್ಲಕ ಕಾರಣಕ್ಕೆ ಇಬ್ಬರ ಭೀಕರ ಕೊಲೆ: ಬೆಳಗಾವಿ-ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಘಟನೆ

Spread the love

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಗುಂಪು ತಲವಾರ್​ನಿಂದ ಬಾಲಕನೋರ್ವನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಚನ್ನಮ್ಮ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಮಲ್ಲಾಪೂರ ಗ್ರಾಮದ ಪ್ರಜ್ವಲ್ ಸುಂಕದ (16) ಮೃತ ಬಾಲಕ.

ನಾಲ್ವರು ಬಾಲಕರು ಸೇರಿಕೊಂಡು ಮಂಗಳವಾರ ಪ್ರಜ್ವಲ್ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆತ​ನನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ತಡರಾತ್ರಿ ಮೃತಪಟ್ಟಿದ್ದಾನೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕ್ಷುಲ್ಲಕ ಕಾರಣಕ್ಕೆ ಬಾಲಕರ ನಡುವೆ ಶುರುವಾದ ಜಗಳ ಓರ್ವ ಬಾಲಕನ ಕೊಲೆಯಲ್ಲಿ ಅಂತ್ಯವಾಗಿದೆ. ಕಿತ್ತೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಹುಬ್ಬಳ್ಳಿಯ ಸಿಲ್ವರ್ ಟೌನ್​ನಲ್ಲಿ ನಡೆದಿದೆ. ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ (24) ಎಂದು ಗುರುತಿಸಲಾಗಿದೆ.

ಈತ ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ. ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ಕಳೆದ ರಾತ್ರಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

 


Spread the love

About Laxminews 24x7

Check Also

ರಸ್ತೆ ಗುಂಡಿ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ‘ಗುಂಡಿಗಳಿಗೆ ಅವರ ಸರ್ಕಾರವೇ ಪಿತಾಮಹ’ – ಡಿಸಿಎಂ

Spread the love ಬೆಂಗಳೂರು: ರಾಜ್ಯ ಸರ್ಕಾರವು ಕೂಡಲೇ ಕಾರ್ಯಪ್ರವೃತ್ತವಾಗಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು, ಅಪಘಾತಕ್ಕೆ ಕಾರಣವಾಗುವ ಹಾಗೂ ಜನರ ಜೀವಹಾನಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ