Breaking News

ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್‌ ಮಾಡ್ತೀವಿ: ಸಿದ್ದರಾಮಯ್ಯ

Spread the love

ಚಾಮರಾಜನಗರ : ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿಯು (CWRC) ತಮಿಳುನಾಡಿಗೆ 18 ದಿನಗಳಲ್ಲಿ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್​ನಲ್ಲಿ ಚಾಲೆಂಜ್ ಮಾಡುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹನೂರು ತಾಲೂಕಿನ ಮಾದಪ್ಪನ ಸನ್ನಿಧಾನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರವನ್ನು ಸುಪ್ರೀಂ ಕೋರ್ಟ್​ನಲ್ಲಿ ಚಾಲೆಂಜ್ ಮಾಡುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಈಗಾಗಲೇ ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಸ್ಪಷ್ಟನೆ ನೀಡಿದರು. ಬಳಿಕ, ಕಾವೇರಿ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಕಿಡಿಕಾರಿದರು.

ಚಾಮರಾಜನಗರಕ್ಕೆ ಅಂಟಿದ ಮೌಢ್ಯವನ್ನು ತೊಡೆದು ಹಾಕಿದ್ದೇನೆ. ಕಳೆದ ಬಾರಿ 12 ಸಲ ಭೇಟಿ ನೀಡಿ 5 ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದ್ದೆ. ಇಂದು ಕೆಡಿಪಿ ಸಭೆ ನಡೆಸಲಿದ್ದೇನೆ. ಹಾಗೆಯೇ, ತೀವ್ರ ಬರಗಾಲ ಉಂಟಾಗಿರುವ ಹಿನ್ನೆಲೆಯಲ್ಲಿ ಮಳೆಗಾಗಿ ದೇವರ ಮೊರೆ ಹೋಗಿದ್ದೇನೆ. ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮಾದಪ್ಪನ ಮೇಲೆ ನನಗೆ ನಂಬಿಕೆ ಇದೆ. ಉತ್ತಮ ಮಳೆ ಬೀಳುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ: ನೀರು ಹಂಚಿಕೆ ವಿಚಾರವಾಗಿ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, “ಪೆಟ್ಟಿನ ಮೇಲೆ ಪೆಟ್ಟು ತಿನ್ನುತ್ತಿರುವ ಕರ್ನಾಟಕಕ್ಕೆ ಈಗ ಮತ್ತೆ ದೊಡ್ಡ ಹಿನ್ನಡೆ ಆಗಿದೆ. ಹಿನ್ನಡೆ ಎನ್ನುವುದು ನಿರಂತರವಾಗಿದ್ದು, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಇನ್ನೂ 18 ದಿನಗಳ ಕಾಲ ನಿತ್ಯವೂ 3,000 ಕ್ಯೂಸೆಕ್ ಹರಿಸಲು ಕರ್ನಾಟಕಕ್ಕೆ ಆದೇಶ ನೀಡಿದೆ. ಇದು ನಿಜಕ್ಕೂ ಆಘಾತಕಾರಿ, ಕಾವೇರಿ ಮತ್ತು ಕನ್ನಡಿಗರ ಪಾಲಿಗೆ ಮರಣ ಶಾಸನ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ