Breaking News

ಲೋಕಸಭೆ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್​ ಮೈತ್ರಿ.. ದಳ ಅವಕಾಶವಾದಿ ಪಕ್ಷ: ಕಾಂಗ್ರೆಸ್ ಟೀಕೆ

Spread the love

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಜನತಾ ದಳ (ಜಾತ್ಯತೀತ) ಮತ್ತು ಬಿಜೆಪಿ ಮಾಡಿಕೊಂಡಿರುವ ಮೈತ್ರಿಗೆ ಆರಂಭದಲ್ಲೇ ವಿಘ್ನ ಶುರುವಾಗಿದೆ.

ಮೈತ್ರಿ ಪ್ರಕಟವಾದ ಕೆಲವೇ ದಿನಗಳಲ್ಲಿ ಹಲವಾರು ಮುಸ್ಲಿಂ ನಾಯಕರು ಜೆಡಿಎಸ್​ ತೊರೆದಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

ಈ ಹೊಂದಾಣಿಕೆ ಮುಂದಿನ ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು, ಕಾಂಗ್ರೆಸ್​ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜೆಡಿಎಸ್-ಬಿಜೆಪಿ ಮೈತ್ರಿ ಚುನಾವಣೆಯಲ್ಲೂ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ಈಟಿವಿ ಭಾರತ್​ಗೆ ತಿಳಿಸಿದ್ದಾರೆ.

ರಾಜೀನಾಮೆಗೆ ಮುಂದಾದ ಮುಸ್ಲಿಂ ಮುಖಂಡರು: ವರದಿಗಳ ಪ್ರಕಾರ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ಶಾಹಿದ್ ನೇತೃತ್ವದ ಅಲ್ಪಸಂಖ್ಯಾತರ ವಿಭಾಗ ಸೇರಿದಂತೆ ಮೈಸೂರು ನಗರದ ಜೆಡಿಎಸ್ ಘಟಕದ 60ಕ್ಕೂ ಹೆಚ್ಚು ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ. ಮೈತ್ರಿ ಅಧಿಕೃತವಾಗಿ ಘೋಷಣೆಯಾದ ಕೆಲವೇ ದಿನಗಳಲ್ಲಿ ಪ್ರಧಾನ ಕಾರ್ಯದರ್ಶಿ ಮತ್ತು ಶಿವಮೊಗ್ಗ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಮಾಧ್ಯಮ ವಕ್ತಾರರು ಸೇರಿದಂತೆ ಹತ್ತಾರು ಜೆಡಿಎಸ್ ಮುಸ್ಲಿಂ ಮುಖಂಡರು ರಾಜೀನಾಮೆ ನೀಡಿದ್ದಾರೆ. ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತುಮಕೂರು ಗ್ರಾಮಾಂತರ ಜೆಡಿಎಸ್ ಮಾಜಿ ಶಾಸಕ ಗೌರಿ ಶಂಕರ್ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಬಿಜೆಪಿ ಜೊತೆ ಕೈಜೋಡಿಸಿರುವ ಜೆಡಿಎಸ್‌ ನಡೆಯಿಂದಾಗಿ ಮುಸ್ಲಿಂ ಮುಖಂಡರು ಹತಾಶೆಗೊಂಡಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನ ಮತಗಳಿಕೆ ಕುಸಿದಿದ್ದು, ಬಿಜೆಪಿಯ ಜೊತೆಗೆ ಲೋಕಸಭಾ ಕಣಕ್ಕಿಳಿಸಲು ಯತ್ನಿಸುತ್ತಿದೆ. ಆದರೆ, ಈ ಹೊಂದಾಣಿಕೆ ಎರಡೂ ಪಕ್ಷಗಳಿಗೆ ನೆರವಾಗುವುದಿಲ್ಲ. ವಾಸ್ತವವಾಗಿ, ಇದು ಕಾಂಗ್ರೆಸ್‌ಗೇ ಪ್ಲಸ್​ ಆಗಲಿದೆ ಎಂದು ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್ ತಿಳಿಸಿದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ