Breaking News

ನಾಳೆ ಕರ್ನಾಟಕ ಬಂದ್​ ಹಿನ್ನೆಲೆ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿ

Spread the love

ನಾಳೆ ಕರ್ನಾಟಕ ಬಂದ್​ ಹಿನ್ನೆಲೆ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ‌ ದಯಾನಂದ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿದ್ದವು.

ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದರು. ತಮಿಳು ಭಾಷಿಕರು ವಾಸವಿರುವ ಪ್ರದೇಶ, ಚಿತ್ರಮಂದಿರ ಸೇರಿದಂತೆ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಸೂಕ್ತ ಭದ್ರತೆ ಕಲ್ಪಿಸಿದ್ದರು. ನಾಳೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ‌ ದಯಾನಂದ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಬಂದ್​ ಹಿನ್ನೆಲೆ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಪೊಲೀಸ್​ ಹಿರಿಯ ಅಧಿಕಾರಿ ಬಿ ದಯಾನಂದ, ನಾಳೆ ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನೆಲೆ ಬೆಂಗಳೂರಲ್ಲಿ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರತಿಭಟನಾ ಮೆರವಣಿಗೆ, ರ‍್ಯಾಲಿಗಳಿಗೆ ಅವಕಾಶವಿರುವುದಿಲ್ಲ. ಬೆಂಗಳೂರಿನಲ್ಲಿ ಇಂದು ರಾತ್ರಿ 12 ರಿಂದ ನಾಳೆ ರಾತ್ರಿ 12ರವರೆಗೂ 144 ಸೆಕ್ಷನ್ ಜಾರಿಯಿರಲಿದೆ. ಫ್ರೀಡಂ ಪಾರ್ಕಿನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶವಿರಲಿದೆ. ಸಂಘಟನೆಗಳ ಕಡೆಯವರಿಗೂ ಈ ಕುರಿತು ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.

ಬಂದ್ ಕರೆಗಳ ಕುರಿತು ಸುಪ್ರಿಂ ಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ. ಬಂದ್ ಸಮಯದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಆಯೋಜಕರೆ ಹೊಣೆ ಆಗಿರುತ್ತಾರೆ. ಸ್ವಯಂಪ್ರೇರಿತವಾಗಿ ಬಂದ್​ಗೆ ಅಡ್ಡಿಯಿಲ್ಲ. ಆದ್ರೆ ಬಲವಂತದ ಬಂದ್ ಮಾಡಿಸುವಂತಿಲ್ಲ. ನಗರದಲ್ಲಿ ಸಂಪೂರ್ಣವಾಗಿ ಎಲ್ಲಾ ಅಧಿಕಾರಿಗಳು ಬಂದೋಬಸ್ತ್​ನಲ್ಲಿರುತ್ತಾರೆ. ಇದಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್‌ಆರ್​ಪಿ, ಸಿಎಆರ್, ಗೃಹರಕ್ಷಕದಳದ ಸಿಬ್ಬಂದಿಯನ್ನೂ ನಿಯೋಜಿಸಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಪರಾಧ ಹಿನ್ನೆಲೆಯುಳ್ಳವರನ್ನ ವಶಕ್ಕೆ ಪಡೆದುಕೊಳ್ಳಲಿದ್ದೇವೆ. ಯಾವುದೇ ಸಿನಿಮಾ ಸ್ಟಾರ್ ನಟರ ಭಾಗಿಯಾಗುವ ಕುರಿತು ಇದುವರೆಗೂ ಮಾಹಿತಿಯಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು.

Spread the loveಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ