ಬೆಂಗಳೂರು,ನ.5- ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಯನ್ನು ಧರಿಸಲು ಹಾಗೂ ಮೇಜಿನ ಮೇಲೆ ನಾಮಫಲಕ ಪ್ರದರ್ಶಿಸಲು ಸರ್ಕಾರ ಆದೇಶಿಸಿದೆ. ಕರ್ತವ್ಯದ ಅವಧಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ತಮ್ಮ ತಮ್ಮ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸಿ ಪ್ರದರ್ಶಿಸಬೇಕು.ಹಾಗೆಯೇ ಕಚೇರಿಯಲ್ಲಿ ಕುಳಿತುಕೊಳ್ಳುವ ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಸಿಬ್ಬಂದಿ ಮತ್ತು ಅಧಿಕಾರಿಗಳ ಹೆಸರು, ಹುದ್ದೆ ಸೂಚಿಸುವ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಸೂಚಿಸಲಾಗಿದೆ
ಈ ರೀತಿ ಮಾಡುವ ಮೂಲಕ ಸಾರ್ವಜನಿಕ ಸೇವೆಯಲ್ಲಿ ಪಾರ ದರ್ಶಕತೆಯನ್ನು ತರಲು ಕ್ರಮ ಕೈಗೊಳ್ಳು ವಂತೆ ರಾಜ್ಯ ಸರ್ಕಾರದ ಎಲ್ಲಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯ ದರ್ಶಿಗಳು, ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ಅಧಿಕಾರಿಗಳು ತಮ್ಮ ಅಧೀನದ ನಿಗಮ ಮಂಡಳಿಗಳ ಅಧಿಕಾರಿಗಳಿಗೆ ಈ ಆದೇಶವನ್ನು ಪಾಲಿಸಲು ಸೂಕ್ತ ನಿರ್ದೇಶನ ನೀಡುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಸರ್ಕಾರಿ ಕಚೇರಿ ಗಳಿಗೆ ದಿನನಿತ್ಯ ಭೇಟಿ ನೀಡುವ ಸಂದರ್ಭದಲ್ಲಿ ಯಾವ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಭೇಟಿ ಮಾಡಬೇಕೆಂಬ ಮಾಹಿತಿ ಲಭ್ಯವಿರುವುದಿಲ್ಲ. ಹೀಗಾಗಿ ಬ್ಯಾಂಕ್ ಮತ್ತು ಅಂಚೆ ಕಚೇರಿ ಗಳಲ್ಲಿ ಇರುವಂತೆ ಸರ್ಕಾರದ ಎಲ್ಲಾ ಕಚೇರಿಗಳಲ್ಲಿ, ನಿಗಮ ಮಂಡಳಿಗಳಲ್ಲಿ ಕಾರ್ಯ ನಿರ್ವಹಿ ಸುವ ಅಧಿಕಾರಿ ಮತ್ತು ಸಿಬ್ಬಂದಿ ಗುರುತಿನ ಚೀಟಿ ಧರಿಸುವುದರ ಜೊತೆಗೆ ನಾಮಫಲಕವನ್ನು ಪ್ರದರ್ಶಿಸಲು ಸೂಚಿಸಲಾಗಿದೆ.