Breaking News

ಕಾವೇರಿ ಕಿಚ್ಚು ಹೆಚ್ಚಿದ್ದು ಪ್ರತಿಭಟನಕಾರರ ಆಕ್ರೋಶ

Spread the love

ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಿದ್ದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದ ಸಂಜಯ ವೃತ್ತದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ಇನ್ನು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಬಳಿ ಬೆಳ್ಳಂಬೆಳಗ್ಗೆ ಕಾವೇರಿ ನದಿಗಿಳಿದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಸ್ತೂರಿ ಕನ್ನಡ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ತಮಿಳುನಾಡಿಗೆ ನೀರು ಬಿಡಲು ಆದೇಶ ಕೊಟ್ಟ ಸುಪ್ರೀಂ ಕೋರ್ಟ್​ ಹಾಗೂ ನೀರು ಬಿಟ್ಟ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಕ್ಷಣವೇ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸಲು ಒತ್ತಾಯಿಸಲಾಗಿದೆ.

ಮೈಸೂರಿನಲ್ಲಿ ಬಂದ್​ಗೆ ವ್ಯಾಪಕ ಬೆಂಬಲ: ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಸಾಂಸ್ಕೃತಿಕ ನಗರಿಯಲ್ಲಿ ವ್ಯಾಪಾಕ ಬೆಂಬಲ ವ್ಯಕ್ತವಾಗಿದ್ದು, ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ನಗರದ ಹೋಟೆಲ್ ಮಾಲೀಕರು, ಆಟೋ ಚಾಲಕರ ಸಂಘ, ಲಾರಿ ಮಾಲೀಕರ ಸಂಘ, ವರ್ತಕರ ಸಂಘ, ಚಲನಚಿತ್ರ ಮಂದಿರ ಮಾಲೀಕರ ಸಂಘ, ಬೀದಿ ಬದಿ ವ್ಯಾಪಾರಿಗಳ ಸಂಘ ಸೇರಿದಂತೆ ಬಹುತೇಕ ಸಂಘಟನೆಗಳು ಕರ್ನಾಟಕ ಬಂದ್​ಗೆ ಬೆಂಬಲ ಸೂಚಿಸಿವೆ. ಜೊತೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಬಂದ್​ಗೆ ಮೈಸೂರು ನಗರದಲ್ಲಿ ಬೆಂಬಲ ಸಿಕ್ಕಿದೆ.

ಬಂದ್​ನಿಂದ ನಗರ ಬಸ್ ನಿಲ್ದಾಣ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್​ಗಳ ಓಡಾಟ ಇರಲಿಲ್ಲ, ಪ್ರಯಾಣಿಕರ ಸಂಖ್ಯೆಯು ಕೂಡ ಕಡಿಮೆ ಇದ್ದು ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೋಟೆಲ್​ಗಳು ಬಂದ್ ಆಗಿದ್ದ ಕಾರಣ ಜನರು ಊಟ ತಿಂಡಿಗೆ ಪರದಾಡುವ ಸ್ಥಿತಿ ಕಂಡುಬಂತು


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ