Breaking News

ಸಿದ್ದರಾಮಯ್ಯ ಒಬ್ಬ ಹುಚ್ಚ, : ಸಚಿವ ಈಶ್ವರಪ್ಪ

Spread the love

ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯನಿಗೆ ಹುಚ್ಚು. ಮುಖ್ಯಮಂತ್ರಿ ಸ್ಥಾನ ಹೋದನಂತರ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದು ಹೋಗಿದೆ ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆಯ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಎಂದಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು. ಸಿದ್ದರಾಮಯ್ಯನಿಗೆ ಆಕಾಶದಿಂದ ಸುದ್ದಿ ಉದುರಿದ್ಯಾ? ಮೋದಿ, ನಡ್ಡಾ, ಅಮಿತ್ ಶಾ ಫೋನ್ ಮಾಡಿ ಹೇಳಿದ್ರಾ? ನೀವು ಜನರ ಮಧ್ಯೆ ಹೋಗಿ ಕೆಲಸ ಡಿ. ನಾನು ದೇವಸ್ಥಾನದಲ್ಲಿ ಇದೀನಿ, ಇಲ್ಲದಿದ್ದರೆ ಇನ್ನೂ ಕೆಟ್ಟ ಪದ ಹೇಳ್ತಿದ್ದೆ ಎಂದು ಕಿಡಿಕಾರಿದರು.

ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ಕುರಿತಾರ ಸಿದ್ದರಾಮಯ್ಯ ಹೇಳಿಕೆ ಮತ್ತು ರಾಜ್ಯದಲ್ಲಿ ಸಿಎಂ ಬದಲಾವಣೆ ಎಂದಿರುವ ಬಗೆಗೂ ಸಚಿವ ಈಶ್ವರಪ್ಪ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಉಡುಪಿಯಲ್ಲಿ ಹರಿಹಾಯ್ದಿದ್ದಾರೆ.

ಮಾಜಿ ಸಚಿವ ವಿನಯ ಕುಲಕರ್ಣಿಯನ್ನು ಸಿಬಿಐ ಬಂಧಿಸಿರುವ ವಿಚಾರಕ್ಕೆ ಸಂಬಂಧಸಿದಂತೆ, ಇದು ರಾಜಕೀಯ ಪ್ರೇರಿತ ಬಂಧನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ. ಕೊಲೆ ಪ್ರಕರಣವನ್ನು ತನಿಖೆ ಮಾಡಬಾರದಾ? ಹಾಗಾದ್ರೆ ಕೊಲೆಗೆ ಕಾಂಗ್ರೆಸ್ ಬೆಂಬಲ ಕೊಡುತ್ತಾ? ಸಿದ್ದರಾಮಯ್ಯ ಬೆಂಬಲ ಕೊಡುವುದಾದರೆ ಒಪ್ಪಿಕೊಂಡು ಬಿಡಲಿ ಎಂದರು.

ನಮ್ಮವರನ್ನೆಲ್ಲ ಜೈಲಿಗೆ ಕಳಿಸಿದ್ದು ಕೂಡಾ ರಾಜಕೀಯ ಪ್ರೇರಿತನಾ? ಬಾಯಿಗೆ ಬಂದಂತೆ ಮಾತನಾಡುವುದು ವಿರೋಧಪಕ್ಷದ ನಾಯಕನಿಗೆ ಶೋಭೆ ತರುವುದಿಲ್ಲ. ವಿನಯ್ ಕುಲಕರ್ಣಿ ತಪ್ಪಿತಸ್ಥನಲ್ಲದಿದ್ದರೆ ಬಿಡುಗಡೆಯಾಗಿ ಹೊರಗೆ ಬರಲಿ. ಕಾಂಗ್ರೆಸ್‌ನ ದೋರಣೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ