Breaking News

ವಾಣಿಜ್ಯ ಸಿಲಿಂಡರ್​ ಬೆಲೆ 209 ರೂ ಏರಿಕೆ.. ಹೋಟೆಲ್​ ಉದ್ಯಮಿಗಳಿಗೆ ಶಾಕ್​

Spread the love

ನವದೆಹಲಿ : ವಾಣಿಜ್ಯ ಅಡುಗೆ ಅನಿಲ (ಎಲ್‌ಪಿಜಿ) ದರ 19 ಕೆಜಿ ಸಿಲಿಂಡರ್‌ಗೆ 209 ರೂ. ಗಳಷ್ಟು ಹೆಚ್ಚಿಸಲಾಗಿದೆ.

ಇದರಿಂದ ಹೋಟೆಲ್​ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಸದ್ಯ ಗೃಹಬಳಕೆಯ ಎಲ್‌ಪಿಜಿಯ ಬೆಲೆ ಪ್ರತಿ 14.2 ಕೆಜಿ ಸಿಲಿಂಡರ್‌ಗೆ ರೂ. 903 ರಷ್ಟಿದೆ.

ಇದೇ ವೇಳೆ ವಿಮಾನಯಾನ ಇಂಧನದ ಬೆಲೆಯನ್ನು ಹೆಚ್ಚಿಸಲಾಗಿದೆ. ಕೆಲವೇ ದಿನಗಳಲ್ಲಿ ದೇಶದಲ್ಲಿ ದಸರಾ, ದೀಪಾವಳಿ ಸೇರಿದಂತೆ ಹಬ್ಬದ ಸೀಸನ್ ಆರಂಭವಾಗಲಿದೆ. ಈ ಹಿನ್ನೆಲೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಾರಿಗೆಗಾಗಿ ವಿಮಾನಗಳನ್ನು ಬಳಸುತ್ತಾರೆ. ಹೀಗಿರುವಾಗ, ಹಬ್ಬದ ಸೀಸನ್ ಆರಂಭವಾಗುವ ಮುನ್ನವೇ ಪ್ರಯಾಣಿಕರಿಗೆ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಬಿಗ್ ಶಾಕ್ ನೀಡಿದ್ದು, ಇಂದು ಜೆಟ್ ಇಂಧನ ಅಥವಾ ಎಟಿಎಫ್ ಬೆಲೆಯನ್ನು ಶೇಕಡಾ 5 ರಷ್ಟು ಹೆಚ್ಚಿಸಿವೆ.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳು ನೀಡಿದ ಮಾಹಿತಿ ಪ್ರಕಾರ, ಏವಿಯೇಷನ್ ಟರ್ಬೈನ್ ಇಂಧನ (ATF) ಬೆಲೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕಿಲೋಲೀಟರ್‌ಗೆ 5,779.84 ರೂ. ಅಥವಾ ಶೇಕಡಾ 5.1 ರಷ್ಟು ಹೆಚ್ಚಿಸಲಾಗಿದೆ. ಸದ್ಯಕ್ಕೆ ದೆಹಲಿಯಲ್ಲಿ ಎಟಿಎಫ್ ಬೆಲೆ ಪ್ರತಿ ಕಿಲೋ ಲೀಟರ್​ಗೆ 1,18,199.17 ರೂ.ಗೆ ತಲುಪಿದ್ದು, ಇಂದಿನಿಂದಲೇ ಹೊಸ ಬೆಲೆ ಜಾರಿಗೆ ಬಂದಿದೆ.

ಮೆಟ್ರೋ ನಗರಗಳಲ್ಲಿ ಎಟಿಎಫ್ ಬೆಲೆ ಇಂತಿದೆ:

  • ದೆಹಲಿ – ಪ್ರತಿ ಕಿಲೋ ಲೀಟರ್‌ಗೆ 1,18,199.17 ರೂಪಾಯಿ
  • ಕೋಲ್ಕತ್ತಾ- ಪ್ರತಿ ಕಿಲೋ ಲೀಟರ್‌ಗೆ 1,26,697.08 ರೂಪಾಯಿ
  • ಮುಂಬೈ- ಪ್ರತಿ ಕಿಲೋ ಲೀಟರ್‌ಗೆ 1,10,592.31 ರೂಪಾಯಿ
  • ಚೆನ್ನೈ- ಪ್ರತಿ ಕಿಲೋ ಲೀಟರ್‌ಗೆ 1,22,423.92 ರೂಪಾಯಿ

ಸೆಪ್ಟೆಂಬರ್ 1 ರಂದು ಕೂಡ ಬೆಲೆ ಏರಿಕೆಯಾಗಿತ್ತು : ಕಳೆದ ಸೆಪ್ಟೆಂಬರ್ 1 ರಂದು ಎಟಿಎಫ್ ಬೆಲೆಗಳಲ್ಲಿ ಹೆಚ್ಚಳ ಮಾಡಲಾಗಿತ್ತು. ಇದೀಗ ಹಬ್ಬದ ಸೀಸನ್ ಪ್ರಾರಂಭವಾಗುವ ಮೊದಲೇ ಬೆಲೆ ಏರಿಕೆ ಮಾಡಿರುವುದರಿಂದ ಏರ್‌ಲೈನ್ಸ್ ಕಂಪನಿಗಳ ಆತಂಕಕ್ಕೆ ಕಾರಣವಾಗಿದೆ. ಇದೀಗ ಅಕ್ಟೋಬರ್ ತಿಂಗಳ ಪ್ರಾರಂಭದಲ್ಲಿ (ಇಂದು) ವಾಯು ಇಂಧನದ ಬೆಲೆ ಏರಿಕೆ ಮಾಡಿರುವುದು ಸೇರಿದಂತೆ ಸತತ ನಾಲ್ಕು ಬಾರಿ ಬೆಲೆ ಹೆಚ್ಚಿಸಲಾಗಿದೆ.

ಕಳೆದ ಜುಲೈ 1 ರಂದು ಕೂಡ ತೈಲ ಕಂಪನಿಗಳು ಎಟಿಎಫ್ ಬೆಲೆಯನ್ನು ಶೇಕಡಾ 1.65 ರಷ್ಟು ಹೆಚ್ಚಿಸಿದ್ದವು. ಜೆಟ್ ಇಂಧನ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವೆಂದರೆ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರಿ ಏರಿಕೆಯಾಗಿದ್ದು, ಅದರ ಬೆಲೆ 97 ಡಾಲರ್​ಗೆ ತಲುಪಿದೆ. ಜುಲೈನಿಂದ ಇಲ್ಲಿಯವರೆಗೆ ಕಚ್ಚಾ ತೈಲದ ಬೆಲೆ ಶೇ.30ರಷ್ಟು ಏರಿಕೆ ಕಂಡಿದ್ದು, ಸೆಪ್ಟೆಂಬರ್ ತಿಂಗಳೊಂದರಲ್ಲೇ ಶೇ.15ರಷ್ಟು ಹೆಚ್ಚಳವಾಗಿದೆ.

ಇನ್ನು ಕೆಲವೇ ದಿನಗಳಲ್ಲಿ ಹಬ್ಬದ ಸೀಸನ್ ಆರಂಭವಾಗಲಿದೆ. ನವರಾತ್ರಿ, ದಸರಾ, ದೀಪಾವಳಿ ಸಂದರ್ಭದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ನಗರಗಳಿಂದ ತಮ್ಮ ಮನೆಗಳಿಗೆ ಹೋಗುತ್ತಾರೆ. ಈ ಸಂದರ್ಭದಲ್ಲಿ ವಾಯು ಇಂಧನ ಬೆಲೆ ಏರಿಕೆಯ ಪರಿಣಾಮ ವಿಮಾನ ದರದ ಮೇಲೂ ಗೋಚರಿಸಲಿದೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ