Home / ರಾಜಕೀಯ / ಸಿಎಂ ಸ್ಥಾನದ ಬಯಕೆ ಹೊಂದಿದ್ದ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಸಿಎಂ ಸ್ಥಾನದ ಬಯಕೆ ಹೊಂದಿದ್ದ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹತಾಶರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಬರುತ್ತದೆ, ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದುಕೊಂಡಿದ್ದರು. ಈಗ ಭ್ರಮನಿರಸನಗೊಂಡಿದ್ದಾರೆ. ಹಾಗಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ನಮ್ಮದು ಜಾತ್ಯತೀತ ಸರ್ಕಾರ. ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳನ್ನು ಜಾತಿ ನೋಡಿ ಕೊಟ್ಟಿಲ್ಲ. ಎಲ್ಲಾ ಜಾತಿಗಳನ್ನೂ ಸಮಾನವಾಗಿ ಕಾಣುತ್ತೇವೆ ಎಂದರು. ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕೆಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿರುವ ಬಗ್ಗೆ ಮಾತನಾಡಿ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಮುಂದಿನ ಬಜೆಟ್​ನಲ್ಲಿ ಮಾಸಾಶನ ಹೆಚ್ಚಳ-ಸಿಎಂ: ಇದಕ್ಕೂ ಮೊದಲು, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು. ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು, ನೀವೆಲ್ಲಾ ಎಷ್ಟು ವರ್ಷ ಬದುಕುತ್ತೇವೆ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದು ತಿಳಿಸಿದರು.

ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್​ನಲ್ಲಿ ಹೆಚ್ಚಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹನಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಸಿಎಂ ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಹಿರಿಯ ನಾಗರಿಕರ ಸ್ಮರಣೆ ಕೇವಲ ಈ ಒಂದು ದಿನಕ್ಕೆ ಸೀಮಿತವಾಗಬಾರದು. ಹಿರಿಯ ನಾಗರಿಕರ ಅನುಭವ ನಮಗೆಲ್ಲರಿಗೂ ಸಂಪನ್ಮೂಲ ಆಗಬೇಕು. ಹಿರಿಯರ ಅನುಭವದ ಮಾತುಗಳು ನಮಗೆ ಬಹಳ ಮುಖ್ಯ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ