Breaking News

ನಿಮಗೆ ಕಾಂಗ್ರೆಸ್‌ನಲ್ಲಿ 7 ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇನ್ನೆಷ್ಟುಬೇಕಿತ್ತು?ಶಾಮನೂರು ಶಿವಶಂಕರಪ್ಪನವರು ಒಂದು ಜಾತಿಯ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿರುವುದನ್ನು ನಾನು ಖಂಡಿಸುತ್ತೇನೆ

Spread the love

ಬೆಳಗಾವಿ: ಜಾತ್ಯತೀತ ತತ್ವದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್‌ ಪಕ್ಷದ ಪ್ರತಿನಿಧಿಯಾದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರು ಒಂದು ಜಾತಿಯ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿರುವುದನ್ನು ನಾನು ಖಂಡಿಸುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ, ಮಾಜಿ ಸಚಿವ ಹೆಚ್‌.ವಿಶ್ವನಾಥ್ ಹೇಳಿದರು. “ನಿಮಗೆ ಕಾಂಗ್ರೆಸ್‌ನಲ್ಲಿ ಅವಕಾಶಗಳು ಸಿಕ್ಕಿವೆ. 33 ಸಚಿವರಲ್ಲಿ ಏಳು ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇನ್ನೆಷ್ಟು ಸ್ಥಾನ ಬೇಕಿತ್ತು” ಎಂದು ಅವರು ಪ್ರಶ್ನಿಸಿದರು.

ಅಖಿತ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ, ರಾಜ್ಯ ಸರ್ಕಾರದಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗಿದೆ ಹಾಗೂ ಸಮಾಜದ ಅಧಿಕಾರಿಗಳಿಗೆ ತೊಂದರೆಯಾಗಿದೆ ಎಂದು ದೂರಿದ್ದರು. ಈ ಹೇಳಿಕೆಯ ಬಗ್ಗೆ ಬೆಳಗಾವಿಯಲ್ಲಿಂದು ಪ್ರತಿಕ್ರಿಯಿಸಿದ ವಿಶ್ವನಾಥ್, ”ನಮ್ಮಲ್ಲಿ ಜಾತಿ ಆಧರಿಸಿ ಯಾರಿಗೂ ಹುದ್ದೆ ಕೊಡುವುದಿಲ್ಲ. ಬೇರೆ-ಬೇರೆ ಜಾತಿಯವರಿಗೆ ಎಲ್ಲೆಲ್ಲಿ ಅವಕಾಶ ಮಾಡಿಕೊಡಬೇಕೋ, ಅಲ್ಲಿ ಮಾಡಿಕೊಡಲಾಗಿದೆ. ಲಿಂಗಾಯತರಿಗೆ ಏಳು ಸಚಿವ ಸ್ಥಾನ ಕೊಡಲಾಗಿದೆ. ನಿಮಗೆ ಮುಖ್ಯಮಂತ್ರಿ ಸ್ಥಾನ ಬೇಕಿದ್ದರೆ ನಾಯಕತ್ವವನ್ನು ನೀವೇ ವಹಿಸಿಕೊಳ್ಳಿ” ಎಂದು ತೀಕ್ಷ್ಣವಾಗಿ ಹೇಳಿದರು.

”ನಿಮ್ಮ ಸಮುದಾಯದವರಿಂದ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ಹಾಕಿಸಿ, ಗೆದ್ದು ಬಂದು ಮುಖ್ಯಮಂತ್ರಿಯಾಗಿ. ಈ ಬಗ್ಗೆ ನೀವು ಹೆಚ್ಚಿನ ಆಸಕ್ತಿ ವಹಿಸಿ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಸಮುದಾಯದಿಂದ ಎಷ್ಟು ಮತ ಹಾಕಿಸಿದ್ದೀರಾ ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಅವರಿಂದಲೇ ನೀವೆಲ್ಲ ಗೆದ್ದಿದ್ದೀರಿ ಎಂದು ನಾನು ಬಹಳ ಖಾರವಾಗಿ ಹೇಳಬೇಕಾಗುತ್ತದೆ. ಹೀಗಾಗಿ, ಅನಾವಶ್ಯಕವಾಗಿ ಮಾತನಾಡಬೇಡಿ” ಎಂದು ಶಿವಶಂಕರಪ್ಪ ಅವರಿಗೆ ಟಾಂಗ್ ನೀಡಿದರು.

 


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ