Breaking News

ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ

Spread the love

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಿರುವ ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಇಂದು ನಡೆದಿದೆ. ಮೂವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

ಘಟನಾ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ನಂತರ ಸ್ಥಳದಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ನೆರೆದಿದ್ದ ಜನರನ್ನು ಚದುರಿಸಿದರು. ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಲಾಗಿದ್ದು, ಸ್ವಲ್ಪದರಲ್ಲೇ ಓರ್ವ ಅಧಿಕಾರಿ, ಸಿಬ್ಬಂದಿ ಪಾರಾಗಿದ್ದಾರೆ. ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಏಳು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ