ವಿಧು ವಿನೋದ್ ಚೋಪ್ರಾ ಅವರ ’12th ಫೇಲ್’ ಚಿತ್ರವನ್ನು ಕನ್ನಡ ಮತ್ತು ಹಿಂದಿಯಲ್ಲಿ ಅಕ್ಟೋಬರ್ 27ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿಯನ್ನು ಕೆ.ಆರ್.ಜಿ ಸ್ಟುಡಿಯೋಸ್ ಹೊತ್ತುಕೊಂಡಿದೆ.
ಕರ್ನಾಟಕದ ಜನತೆಗೆ ಗುಣಮಟ್ಟದ ಚಿತ್ರಗಳನ್ನು ತಲುಪಿಸುವ ನಿಟ್ಟಿನಲ್ಲಿ ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆ.ಆರ್.ಜಿ ಸ್ಟುಡಿಯೋಸ್ ಸದಾ ಮುಂಚೂಣಿಯಲ್ಲಿರುತ್ತದೆ.
ವಿನೂತನ ಕಥೆಗಳನ್ನು ಪ್ರೇಕ್ಷಕರಿಗೆ ಉಣಬಡಿಸುವಲ್ಲಿಯೂ ಮುಂದಡಿ ಇಡುತ್ತಿದೆ.
‘ಪರಿಂದಾ’, ‘1942 ಎ ಲವ್ ಸ್ಟೋರಿ’ ಮುಂತಾದ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸುವುದರ ಜೊತೆಗೆ ‘ಮುನ್ನಾಭಾಯ್’ ಸರಣಿಯ ನಿರ್ಮಾಪಕರಾದ ಬಾಲಿವುಡ್‍ನ ಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕ ವಿಧು ವಿನೋದ್ ಚೋಪ್ರಾ ಅವರೊಂದಿಗೆ ಕಾರ್ತಿಕ್ ಗೌಡ ಮತ್ತು ಯೋಗಿ.ಜಿ.ರಾಜ್ ಒಡೆತನದ ಕೆ.ಆರ್.ಜಿ ಸ್ಟುಡಿಯೋಸ್ ಇದೀಗ ಕೈ ಜೋಡಿಸಿದೆ.