Breaking News

ನಮ್ಮ ಸರ್ಕಾರ ಕೋಮು ಗಲಭೆಯನ್ನು ತಕ್ಷಣ ಹತ್ತಿಕ್ಕುವ ಕೆಲಸ ಮಾಡುತ್ತದೆ: ಸಿಎಂ

Spread the love

ಬೆಳಗಾವಿ: ರಾಜ್ಯದಲ್ಲಿ ಕೋಮು ಗಲಭೆಯನ್ನು ತಕ್ಷಣ ಹತ್ತಿಕ್ಕುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ.

ಒಂದು ವೇಳೆ ಯಾರೇ ಕೋಮು ಗಲಭೆ ಸೃಷ್ಟಿಸಿ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಗಲಭೆ ಕುರಿತು ಪ್ರತಿಕ್ರಿಯಿಸಿ, ಪೊಲೀಸರು ಕಲ್ಲು ತೂರಾಟ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದರು

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಕೋಮು ಗಲಭೆಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ ಮುಖಂಡರು ಆರೋಪಿಸುತ್ತಿರುವ ವಿಚಾರವಾಗಿ ಮಾತನಾಡಿ, ಅವರಿಗೆ ಆರೋಪ ಮಾಡುವುದನ್ನು ಬಿಟ್ಟು ಇನ್ನೇನು ಕೆಲಸ ಇದೆ. ಆರೋಪ ಎಲ್ಲ ಸತ್ಯ ಅಲ್ಲ, ಇವೆಲ್ಲ ಸುಳ್ಳು ಆರೋಪಗಳು ಎಂದು ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು. ಶಿವಮೊಗ್ಗ ಗಲಭೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, ಪ್ರತಿಭಟನೆ ಮಾಡಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದಕ್ಕೆ ನಾವು ಯಾವುದೇ ರೀತಿ ಅಡ್ಡಿ ಮಾಡುವುದಿಲ್ಲ. ಆದರೆ, ಪ್ರತಿಭಟನೆಗೆ ಸಕಾರಣವಿರಬೇಕು ಮತ್ತು ಶಾಂತಿಯುತವಾಗಿರಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯ ಆಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ನಮ್ಮ ಸರ್ಕಾರದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಸರ್ಕಾರ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತಿರುವ ಸರ್ಕಾರ. ಇನ್ನು ಶಾಮನೂರು ಶಿವಶಂಕರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು, ಅವರೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹಳೆ ಹುಬ್ಬಳ್ಳಿ ಗಲಭೆ ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ದಾಖಲಾದ ಪ್ರಕರಣಗಳನ್ನು ವಾಪಸ್ ಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆಯಾ ಎಂದು ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇಂತಹ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಯಾವುದೇ ಪ್ರಸ್ತಾವನೆ ನಮ್ಮ ಸರ್ಕಾರದ ಮುಂದೆ ಇಲ್ಲ. ವಕೀಲರ ಸಂಘದವರು, ಹೋರಾಟ ಸಮಿತಿಯವರು ಒಂದು ಪತ್ರ ಬರೆದಿದ್ದಾರೆ. ಅದನ್ನು ಆಧರಿಸಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ನನಗೆ ಪತ್ರ ಬರೆದಿದ್ದಾರೆ. ಆ ಪತ್ರವನ್ನು ನಾನು ಕೂಡ ಇಂದೇ ನೋಡಿದ್ದು ಎಂದರು.

ನಿಮ್ಮ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುತ್ತೀರಾ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಅದನ್ನು ಆಮೇಲೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ