Breaking News
Home / ರಾಜಕೀಯ / ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಬಗ್ಗೆ ಶಾಮನೂರು ಹೇಳಿಕೆ ತಪ್ಪು: ಶಾಸಕ ಬಸವರಾಜ ರಾಯರೆಡ್ಡಿ

ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಬಗ್ಗೆ ಶಾಮನೂರು ಹೇಳಿಕೆ ತಪ್ಪು: ಶಾಸಕ ಬಸವರಾಜ ರಾಯರೆಡ್ಡಿ

Spread the love

ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಲಾಗಿದೆ ಎಂಬ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನವರ ಹೇಳಿಕೆ ತಪ್ಪು.

ಇದು ಆಡಳಿತದ ಮೇಲೆ ಪರಿಣಾಮ ಬೀರುತ್ತದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದರು. ವಿಧಾನಸೌಧದ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪನವರು ಮಾಹಿತಿ ಕೊರತೆಯಿಂದ ಈ ರೀತಿ ಹೇಳಿಕೆ ನೀಡಿರಬಹುದು ಎಂದರು.

ಅಧಿಕಾರಿಗಳನ್ನು ಸರ್ಕಾರದಲ್ಲಿ ಕಡೆಗಣಿಸಲಾಗಿದೆ. ಲಿಂಗಾಯತ ಅಧಿಕಾರಿಗಳಿಗೆ ಮಹತ್ವವಿಲ್ಲ ಎಂಬ ಹೇಳಿಕೆ ನೀಡಿರುವುದು ಸರಿಯಲ್ಲ. ಜಾತಿ ಆಧಾರದ ಮೇಲೆ ಹುದ್ದೆ ಕೊಡಲಾಗುವುದಿಲ್ಲ. ಎಲ್ಲಾ ಜಾತಿಯಲ್ಲೂ ಅರ್ಹರು ಮತ್ತು ಅನರ್ಹರು ಇರುತ್ತಾರೆ. ಅರ್ಹತೆ ಆಧಾರದ ಮೇಲೆ ಅಧಿಕಾರಿಗಳಿಗೆ ಹುದ್ದೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರ ಸರ್ಕಾರ ಲಿಂಗಾಯತರಿಗೆ ಅನ್ಯಾಯ ಮಾಡಿದೆ ಎಂಬುದನ್ನು ಒಪ್ಪುವುದಿಲ್ಲ. ಸಿದ್ದರಾಮಯ್ಯ ಬಸವ ತತ್ವದ ಅನುಯಾಯಿ. ತಮ್ಮ ಸಂಪುಟದಲ್ಲಿ 7 ಲಿಂಗಾಯತ ಶಾಸಕರಿಗೆ ಸಚಿವ ಸ್ಥಾನ ನೀಡಿದ್ದಾರೆ. ಲಿಂಗಾಯತ ಸಮುದಾಯದ ಮೂರು ಜಿಲ್ಲಾಧಿಕಾರಿಗಳು, 7 ಎಸ್​ಪಿಗಳು, 13 ವಿಶ್ವವಿದ್ಯಾಲಯದ ಕುಲಪತಿಗಳು, ನಾಲ್ಕು ಮಂದಿ ಸಿಇಒಗಳು ಹಾಗೂ ಮುಖ್ಯ ಇಂಜಿನಿಯರ್​ಗಳು ಇದ್ದಾರೆ ಎಂದು ಅಂಕಿಅಂಶಗಳ ಸಹಿತ ಮಾಹಿತಿ ನೀಡಿದರು.

ಜಾತಿ ಆಧಾರದಲ್ಲಿ ಪೋಸ್ಟಿಂಗ್ ಕೊಡಲು ಆಗಲ್ಲ. ಆದರೆ ಮಂತ್ರಿ ಮಾಡುವ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ಕೊಡುತ್ತೇವೆ. ಜಾತಿ ಆಧಾರದಲ್ಲಿ ಮಂತ್ರಿ ಮಾಡುವುದು ಸಹಜ. ಪ್ರಧಾನಿ ಯಾರು ಬೇಕಾದರೂ ಆಗಬಹುದು, ಆದರೆ ಅಟೆಂಡರ್ ಆಗಲು ಮಾನದಂಡವಿದೆ. ಸಿದ್ದರಾಮಯ್ಯ ಸರ್ಕಾರ ಲಿಂಗಾಯತರಿಗೆ ಅನ್ಯಾಯ ಮಾಡಿಲ್ಲ ಎಂದು ಸಮರ್ಥಿಸಿಕೊಂಡರು.

ಸಿದ್ದರಾಮಯ್ಯ ಸ್ವತಃ ಬಸವ ತತ್ವದ ಅನುಯಾಯಿ. ಬಸವತತ್ವ ಸಾಮಾಜಿಕ ನ್ಯಾಯದ ಮೇಲೆ ನಿಂತಿದೆ. ಬಸವೇಶ್ವರ ಭಾವಚಿತ್ರ ಸರ್ಕಾರಿ ಕಚೇರಿಯಲ್ಲಿ ಹಾಕಿಸಲು ಆದೇಶ ಮಾಡಿದ್ದಾರೆ. ಲಿಂಗಾಯತ ಸಿಎಂ ಸಾಕಷ್ಟು ಮಂದಿ ಆಗಿದ್ದರೂ ಬಸವೇಶ್ವರ ಫೋಟೋ ಏಕೆ ಹಾಕಿರಲಿಲ್ಲ? ಕಲಬುರಗಿ ವಿವಿಗೆ ಬಸವೇಶ್ವರ ಹೆಸರು ಇಡಲು ಪ್ರಸ್ತಾಪ ಇತ್ತು.‌ ಆದರೆ ಬಿಜೆಪಿ ಅವಧಿಯಲ್ಲಿ ಏಕಿಡಲಿಲ್ಲ ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಅಲ್ಲ.‌ ಆದರೆ ಅವರಿಗೆ ತಳಸಮುದಾಯದ ಬಗ್ಗೆ ಕಾಳಜಿ ಇದೆ ಎಂದರು.

ಅಧಿಕಾರಿಗಳ ಬಗ್ಗೆ ಜಾತಿ ಆಧಾರದಲ್ಲಿ ಮಾತನಾಡುವುದೇ ತಪ್ಪು. ಸಾಕಷ್ಟು ಚೀಫ್ ಇಂಜಿನಿಯರ್ ಪೋಸ್ಟ್​​ನಲ್ಲಿ ಲಿಂಗಾಯತರಿದ್ದಾರೆ. ಹೀಗೆ ಆದರೆ ನಾಳೆ ಒಕ್ಕಲಿಗರು, ಕುರುಬರು ಮಾತನಾಡುತ್ತಾರೆ. ಹೀಗಾದರೆ ಆಡಳಿತ ನಡೆಸುವುದು ಹೇಗೆ? ಶಾಮನೂರು ಹೇಳಿಕೆ ಪರಿಣಾಮ ಆಡಳಿತದ ಮೇಲೆ ಬೀರುತ್ತದೆ ಎಂದು ಹೇಳಿದರು.

ಶಾಮನೂರು ಶಿವಶಂಕರಪ್ಪ ಪರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಒಪ್ಪಲು ಆಗಲ್ಲ. ಜಾತಿ ಅಧಾರಿತವಾಗಿ ಮಾತನಾಡಬಾರದು. ಆದರೆ ನಾನು ಸಿದ್ದರಾಮಯ್ಯ ಪರವಾಗಿ ವಕಾಲತ್ತು ಮಾಡಲು ಬಂದಿಲ್ಲ. ಸಿದ್ದರಾಮಯ್ಯ ಬಳಿ ನಾನೇನು ಭಿಕ್ಷೆ ಬೇಡಲ್ಲ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ