Breaking News

ಉಜ್ವಲ ಫಲಾನುಭವಿಗಳಿಗೆ ಕೇಂದ್ರದಿಂದ ಖುಷಿ ಸುದ್ದಿ: ಎಲ್​ಪಿಜಿ ಸಿಲಿಂಡರ್​ ಸಬ್ಸಿಡಿ 300 ರೂ.ಗೆ ಹೆಚ್ಚಳ

Spread the love

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸುವ ಎಲ್​ಪಿಜಿ ಸಿಲಿಂಡರ್​ಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ.

ಪ್ರಸ್ತುತ 200 ರೂಪಾಯಿ ಇದ್ದ ಸಬ್ಸಿಡಿಯನ್ನು 300 ರೂ.ಗಳಿಗೆ ಹೆಚ್ಚಿಸಲಾಗಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್​ ಈ ಮಾಹಿತಿ ನೀಡಿದರು.

14.2 ಕೆಜಿಯ ಸಿಲಿಂಡರ್​ ಬೆಲೆ ಮಾರುಕಟ್ಟೆಯಲ್ಲಿ 903 ರೂ. ಇದೆ. ಸದ್ಯ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿಯೊಂದಿಗೆ 703 ರೂಪಾಯಿಗೆ ಲಭ್ಯವಾಗುತ್ತಿದೆ. ಈಗ 100 ರೂಪಾಯಿಗಳ ಸಬ್ಸಿಡಿ ಹೆಚ್ಚಿರುವುದರಿಂದ ಒಟ್ಟು 300 ರೂ. ಸಬ್ಸಿಡಿ ಸಿಗಲಿದ್ದು, ಗ್ಯಾಸ್​ ಸಿಲಿಂಡರ್​ 603 ರೂ.ಗೆ ಲಭ್ಯವಾಗಲಿದೆ.


Spread the love

About Laxminews 24x7

Check Also

ಪಕ್ಷವಿರೋಧಿ ಚಟುವಟಿಕೆ ನಡೆಸುತ್ತಿರುವ ವಿಜಯೇಂದ್ರ ವಿರುದ್ಧವೂ ನೋಟೀಸ್ ಜಾರಿಯಾಗಬೇಕು: ರಮೇಶ್ ಜಾರಕಿಹೊಳಿ

Spread the loveದೆಹಲಿ: ಪ್ರಸ್ತುತವಾಗಿ ನಾವು ವಕ್ಫ್ ವಿರುದ್ಧ ಮಾಡಿದ ಹೋರಾಟದ ವರದಿಯನ್ನು ಜೆಪಿಸಿಗೆ ನೀಡಲು ಬಂದಿದ್ದೇವೆ, ಮುಂದಿನ ಸಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ