Home / ರಾಜಕೀಯ / ಉಜ್ವಲ ಫಲಾನುಭವಿಗಳಿಗೆ ಕೇಂದ್ರದಿಂದ ಖುಷಿ ಸುದ್ದಿ: ಎಲ್​ಪಿಜಿ ಸಿಲಿಂಡರ್​ ಸಬ್ಸಿಡಿ 300 ರೂ.ಗೆ ಹೆಚ್ಚಳ

ಉಜ್ವಲ ಫಲಾನುಭವಿಗಳಿಗೆ ಕೇಂದ್ರದಿಂದ ಖುಷಿ ಸುದ್ದಿ: ಎಲ್​ಪಿಜಿ ಸಿಲಿಂಡರ್​ ಸಬ್ಸಿಡಿ 300 ರೂ.ಗೆ ಹೆಚ್ಚಳ

Spread the love

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸುವ ಎಲ್​ಪಿಜಿ ಸಿಲಿಂಡರ್​ಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ.

ಪ್ರಸ್ತುತ 200 ರೂಪಾಯಿ ಇದ್ದ ಸಬ್ಸಿಡಿಯನ್ನು 300 ರೂ.ಗಳಿಗೆ ಹೆಚ್ಚಿಸಲಾಗಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್​ ಈ ಮಾಹಿತಿ ನೀಡಿದರು.

14.2 ಕೆಜಿಯ ಸಿಲಿಂಡರ್​ ಬೆಲೆ ಮಾರುಕಟ್ಟೆಯಲ್ಲಿ 903 ರೂ. ಇದೆ. ಸದ್ಯ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿಯೊಂದಿಗೆ 703 ರೂಪಾಯಿಗೆ ಲಭ್ಯವಾಗುತ್ತಿದೆ. ಈಗ 100 ರೂಪಾಯಿಗಳ ಸಬ್ಸಿಡಿ ಹೆಚ್ಚಿರುವುದರಿಂದ ಒಟ್ಟು 300 ರೂ. ಸಬ್ಸಿಡಿ ಸಿಗಲಿದ್ದು, ಗ್ಯಾಸ್​ ಸಿಲಿಂಡರ್​ 603 ರೂ.ಗೆ ಲಭ್ಯವಾಗಲಿದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ