Breaking News

ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸಲು ಚಿಂತನೆ: ಸಚಿವ ಸಂತೋಷ್ ಲಾಡ್

Spread the love

ಬೆಳಗಾವಿ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು. ಬಾಲಕಾರ್ಮಿಕರ ರಕ್ಷಣೆಗೆ ಟಾಸ್‌ಪಾಸ್ಕ್ ರಚಿಸುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು.

ಬಾಲ ಕಾರ್ಮಿಕರು ಕಂಡುಬಂದಲ್ಲಿ ತಕ್ಷಣ ಮಕ್ಕಳ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಕಾರ್ಯಕ್ರಮದೊಂದಿಗೆ ಹೆಚ್ಚಿನ ಪ್ರಚಾರ ಕೈಗೊಳ್ಳಿ. ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಇದರ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು ಎಂದು ಎಚ್ಚರಿಕೆ ನೀಡಿದ ಅವರು, ಕಾರ್ಮಿಕ ಭವನ ಈಗಾಗಲೇ ಜಿಲ್ಲೆಯಲ್ಲಿದೆ. ಸ್ಥಳೀಯ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಕೂಡ ಕಾರ್ಮಿಕ ಭವನ, ಕಾರ್ಮಿಕ ಇಲಾಖೆ ಕಚೇರಿಗಳು ಇರಲೇಬೇಕು ಎಂದರು.

ಹೊರಗುತ್ತಿಗೆ ಏಜೆನ್ಸಿಗಳ ವಿರುದ್ಧ ಕ್ರಮ: ಸುಮಾರು 20 ವರ್ಷಗಳಿಂದ ವಿವಿಧ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಸರಿಯಾದ ಇಎಸ್‌ಐ, ಪಿಎಫ್ ಬಗ್ಗೆ ಮಾಹಿತಿ ಕೂಡ ಇರುವುದಿಲ್ಲ. ಹೊರಗುತ್ತಿಗೆ ಏಜೆನ್ಸಿಗಳು ಸರಿಯಾದ ಪ್ರತಿ ಮಾಸಿಕ ವೇತನ ನೀಡುತ್ತಿಲ್ಲ. ಅಂತಹ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಲಾಡ್ ಅಧಿಕಾರಿಗಳಿಗೆ ತಿಳಿಸಿದರು.

ಮಚ್ಚೆ ಭಾಗದಲ್ಲಿ ಇಎಸ್​​ಐ ಆಸ್ಪತ್ರೆ: ಶೇ 90 ರಷ್ಟು ಇಂಡಸ್ಟ್ರಿಯಲ್ ಪ್ರದೇಶವಿರುವ ಮಚ್ಚೆ ಭಾಗದ 2 ಎಕರೆ ಜಾಗದಲ್ಲಿ ಇಎಸ್​​ಐ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾಹಿತಿ ನೀಡಿದರು.

ಅಲ್ಪಸಂಖ್ಯಾತರ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ನೌಕರರಿಗೆ ಏಜೆನ್ಸಿಗಳು ಸರಿಯಾದ ಇಎಸ್​ಐ, ಪಿಎಫ್​ ಪಾವತಿಸುತ್ತಿಲ್ಲ. ಪ್ರತಿ ನೌಕರ ತಿಂಗಳ ವೇತನದಲ್ಲಿ 1 ರಿಂದ 2 ಸಾವಿರ ರೂ ಕಡಿತಗೊಳಿಸುತ್ತಿರುವ ಮಾಹಿತಿ ಲಭ್ಯವಿದೆ. ಈ ಕುರಿತು ಈಗಾಗಲೇ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕರೆದು ವಿಷಯ ಚರ್ಚಿಸಿ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ