Breaking News

ಪೊಲೀಸ್ ಕಮಿಷನರ್ ಕಚೇರಿಯಲ್ಲಿ 12 ಸಿಬ್ಬಂದಿಗೆ ಕೊರೊನಾ,ಆಯುಕ್ತರ ಕಚೇರಿ ಸೀಲ್‍ಡೌನ್

Spread the love

ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿಯಲ್ಲಿ 12 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ.

ಮೂರು ದಿನಗಳ ಕಾಲ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಇದುವರೆಗೂ ವಿವಿಧ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಪೊಲೀಸ್ ಸೋಂಕಿತರ ಸಂಖ್ಯೆ 450ಕ್ಕೆ ಏರಿಕೆಯಾಗಿದೆ.

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಿಸಿಆರ್ ಬಿ ವಿಭಾಗದಲ್ಲಿ 8 ಮತ್ತು ಅಡ್ಮಿನ್ ವಿಭಾಗದಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ಒಂದು ವಾರದಿಂದ ರ‍್ಯಾಂಡಮ್‌ ಟೆಸ್ಟ್ ಮಾಡಲಾಗಿತ್ತು. ರ‍್ಯಾಂಡಮ್‌ ಟೆಸ್ಟ್ ನಲ್ಲಿ ಕೊರೊನಾ ಪತ್ತೆಯಾಗಿದೆ. ಹೀಗಾಗಿ ಮೂರು ದಿನಗಳ ಕಾಲ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ವಿಧಾನಸೌಧ ಠಾಣೆಯ ಕಾನ್ಸ್​ಟೇಬಲ್​ಗೆ ಸೋಂಕು ಇರುವುದು ದೃಢವಾದ ಹಿನ್ನಲೆಯಲ್ಲಿ ಈಗಾಗಲೇ ವಿಧಾನಸೌಧ ಪೊಲೀಸ್ ಠಾಣೆಯನ್ನು ಒಂದು ದಿನ ಸೀಲ್‍ಡೌನ್ ಮಾಡಲಾಗಿದೆ


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ