Breaking News

10 ಸಾವಿರ ಸುಪಾರಿ ಕೊಟ್ಟು ತನ್ನ ಗಂಡನನ್ನು ಕೊಲೆ ಮಾಡಿಸಿದ ಸುಂದರಿ..

Spread the love

ಕಾರವಾರ(ಉತ್ತರಕನ್ನಡ): ಗಂಡನ ಸ್ನೇಹಿತನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಮಹಿಳೆಯೊಬ್ಬಳು ಕೊನೆಗೂ ಅಂದರ್​ ಆಗಿದ್ದಾಳೆ. ಪ್ರಿಯಕರನಿಗೆ ಕೇವಲ 10 ಸಾವಿರ ಸುಪಾರಿ ಕೊಟ್ಟು ತನ್ನ ಗಂಡನನ್ನು ಕುಮಟಾದ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿಸಿರುವ ಪ್ರಕರಣವನ್ನು ಕುಮಟಾ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಲೆಗಾರರ ಸುಳಿವು ನೀಡಿದ ಕೆಎಸ್‌ಆರ್​ಟಿಸಿ ಬಸ್ ಟಿಕೆಟ್: ಹಿಂದಿನ ಸೆ.30 ರಂದು ಕುಮಟಾ ತಾಲೂಕಿನ ದೇವಿಮನೆ ಘಟ್ಟದ ದೇವಸ್ಥಾನವೊಂದರ ಹಿಂಬದಿ ಪ್ರದೇಶದಲ್ಲಿ ಅಪರಿಚಿತ ಶವವೊಂದು ಪತ್ತೆಯಾದಾಗ, ಕುಮಟಾ ಪೊಲೀಸರು ತೆರಳಿ ಪರಿಶೀಲಿಸಿದ್ದರು. ಸುಮಾರು 35 ರಿಂದ 40 ವರ್ಷದ ಪುರುಷನನ್ನು ಯಾರೋ ಕೊಲೆ ಮಾಡಿ ದೇಹವನ್ನು ಎಸೆದು ಹೋಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು.

ಇನ್ನು ಶವದ ಗುರುತಿನ ಪತ್ತೆಗೆ ಕುಮಟಾ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಪತ್ತೆಗೆ ಮುಂದಾದಾಗ ಯಾವ ಮಾಹಿತಿ ಸಿಕ್ಕಿರಲಿಲ್ಲ. ಆದರೆ ಮೃತ ವ್ಯಕ್ತಿಯ ಕಿಸೆಯಲ್ಲಿ ಮಂಗಳೂರಿನಿಂದ ಶಿರಸಿಗೆ ಕೆಎಸ್‌ಆರ್ ಟಿಸಿ ಬಸ್​ನಲ್ಲಿ ಪ್ರಯಾಣಿಸಿದ ಟಿಕೆಟ್​ದಿಂದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ನೆರವಾಯಿತು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ