Breaking News

ಧೋನಿಯನ್ನು ಬಿಗಿದಪ್ಪಿ ಮುತ್ತಿಕ್ಕಿದ ರಣ್​ವೀರ್​​; ಕ್ಯಾಪ್ಟನ್‌ ಕೂಲ್‌ ಜೊತೆ ರಾಮ್ ​​ಚರಣ್

Spread the love

ಎಂ.ಎಸ್‌.ಧೋನಿ ಅವರೊಂದಿಗೆ ನಟರಾದ ರಣ್​ವೀರ್​ ಸಿಂಗ್​ ಮತ್ತು ರಾಮ್​​ ಚರಣ್ ಇರುವ ಫೋಟೋಗಳು ವೈರಲ್ ಆಗಿವೆ.

ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜೊತೆ ಭಾರತೀಯ ಚಿತ್ರರಂಗದ ಸೂಪರ್​ ಸ್ಟಾರ್​ಗಳು ಕಾಣಿಸಿಕೊಂಡರು. ನಿನ್ನೆ, ಸೌತ್ ಸೂಪರ್‌ ಸ್ಟಾರ್ ರಾಮ್ ಚರಣ್ ತಮ್ಮ ಇನ್‌ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದರು.

ಇದೀಗ ಬಾಲಿವುಡ್ ನಟ ರಣ್​​ವೀರ್ ಸಿಂಗ್ ಕೂಡಾ ಅಪರೂಪದ ಫೋಟೋಗಳನ್ನು ಶೇರ್ ಮಾಡಿದ್ದಾರೆ.

 

 

ಮಾಹಿ ಜೊತೆ ರಾಮ್​ ಚರಣ್​​: ಆರ್​ಆರ್​ಆರ್​ ಸಿನಿಮಾ ಮೂಲಕ ಜಗತ್ತಿನಾದ್ಯಂತ ಜನಪ್ರಿಯರಾಗಿರುವ ಟಾಲಿವುಡ್ ನಟ ರಾಮ್​ ಚರಣ್​​ ನಿನ್ನೆ ಸಂಜೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಅಕೌಂಟ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ಜೊತೆಗಿರುವ ಫೋಟೋ ಪೋಸ್ಟ್ ಮಾಡಿಕೊಂಡಿದ್ದರು. ‘ಭಾರತದ ಹೆಮ್ಮೆ ಮಹೇಂದ್ರ ಸಿಂಗ್​ ಧೋನಿಯನ್ನು ಭೇಟಿಯಾಗಿದ್ದು ಬಹಳ ಸಂತಸವಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಅಭಿಮಾನಿಗಳಿಂದ ಪ್ರೀತಿಯ ಮಳೆ: ರಾಮ್​ ಚರಣ್​​ ಶೇರ್ ಮಾಡಿದ ಫೋಟೋ ಕೆಲವೇ ಕ್ಷಣಗಳಲ್ಲಿ ವೈರಲ್​ ಆಗಿದೆ. ಇಬ್ಬರು ಸಾಧಕರ ಅಭಿಮಾನಿಗಳು ಫೋಟೋಗೆ ಮೆಚ್ಚುಗೆ ವ್ಯಕ್ತಪಡಿಸಿ, ಅಭಿಪ್ರಾಯ ಹಂಚಿಕೊಂಡರು. ಸೋಷಿಯಲ್ ಮೀಡಿಯಾ ಬಳಕೆದಾರರೋರ್ವರು, ”ಒಂದೇ ಫ್ರೇಮ್‌ನಲ್ಲಿ ಇಬ್ಬರು ದೇವರು” ಎಂದು ಕಾಮೆಂಟ್​ ಮಾಡಿದ್ದಾರೆ. ಮತ್ತೋರ್ವ ಅಭಿಮಾನಿ, ”ಎರಡು ಸಿಂಹಗಳು ಭೇಟಿಯಾದ ಕ್ಷಣ” ಎಂದಿದ್ದಾರೆ. ”ಒಂದೇ ಫ್ರೇಮ್​ನಲ್ಲಿ ಇಬ್ಬರು ಲೆಜೆಂಡ್ಸ್​” ಎಂದು ಮತ್ತೋರ್ವರು ಮೆಚ್ಚಿಕೊಂಡಿದ್ದಾರೆ. ಮಾಹಿ, ರಾಮ್​ ಇಬ್ಬರೂ ಕೂಡ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇವರ ಫೋಟೋಗಳಿಗೆ ಅಭಿಮಾನಿಗಳು ಫೈಯರ್​, ಹಾರ್ಟ್ ಎಮೋಜಿ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ