ಬೆಂಗಳೂರಿನ ಬ್ಯಾಂಕ್ವೇಟ ಹಾಲ್ ನಲ್ಲಿ ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಂದ ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡಲಾಯಿತು
2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮ ಪಂಚಾಯತಿಯು ಆಯ್ಕೆ ಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಬ್ಯಾಂಕ್ವೇಟ ಹಾಲ್ ನಲ್ಲಿ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು,
ಉಪ ಮುಖ್ಯ ಮಂತ್ರಿಗಳಾದ ಡಿ.ಕೆ. ಶಿವಕುಮಾರವರು ಮತ್ತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಇವರ ಉಪಸ್ಥಿತಿಯಲ್ಲಿ ಜರುಗಿದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಬಸ್ತವಾಡ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು,
ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಬಸ್ತವಾಡ ಗ್ರಾಮ ಪಂಚಾಯತಿಯು ಸತತ ಮೂರನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರವನ್ನು ಪಡೆದು ಸಾಧನೆ ಮಾಡಿದೆ.