Breaking News

ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ,: ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್​​ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ತಿಂಗಳಿಗೊಮ್ಮೆ ಪ್ರಾಧಿಕಾರದ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಪ್ರಾಧಿಕಾರದ ಆಯುಕ್ತರಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಹೊಸ ಮರಳು ನೀತಿ 2020 ಅನ್ನು ಡಿಸೆಂಬರ್ 1, 2021 ರಂದು ಜಾರಿಗೆ ತಂದಿದ್ದು, ಸಣ್ಣ ಬ್ಲಾಕ್​​ಗಳಿವೆ. ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿಯನ್ನೂ ಕಾಪಾಡಬೇಕಿದೆ. ಕಾರ್ಮಿಕರಿಗೆ ಸಮಸ್ಯೆಯಾಗದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.

Non CRZ ಪ್ರದೇಶದಲ್ಲಿ ಟೆಂಡರ್ ಕಂ ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು 39 ಮರಳು ಬ್ಲಾಕ್​​ಗಳನ್ನು ಗುರುತಿಸಲಾಗಿದೆ. ಈ ಪೈಕಿ 9 ಬ್ಲಾಕ್​​ಗಳ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿದ್ದು, 30 ಮರಳು ಬ್ಲಾಕ್​​ಗಳಿಗೆ ಮರುಹರಾಜು ಪ್ರಕ್ರಿಯೆ ಶೀಘ್ರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಭೆಗೆ ಮಾಹಿತಿ ಒದಗಿಸಿದರು.

8 ಲಕ್ಷ ಟನ್ ಮರಳು ಅಗತ್ಯವಿದೆ. ಜೆಲ್ಲಿ, ಕೆಂಪು ಕಲ್ಲಿನ ಸಮಸ್ಯೆ ಇದೆ. ಮಂಗಳೂರು, ಉಡುಪಿಯಲ್ಲಿನ ಹವಾಗುಣಕ್ಕಾಗಿ ಗೃಹನಿರ್ಮಾಣಕ್ಕೆ ಬಳಕೆಯಾಗುತ್ತದೆ. ಇದರಲ್ಲಿ ಬಾಕ್ಸೈಟ್ ಇದೆ ಎಂಬ ಕಾರಣಕ್ಕೆ ಕೈಗಾರಿಕೆಗಳು ಬಳಸುತ್ತವೆ. ಜಿಲ್ಲೆಯಿಂದ ಹೊರಗೆ ಕಳಿಸುವುದು ಬೇಡ ಎಂಬ ಅಭಿಪ್ರಾಯ ಜನರಲ್ಲಿದೆ. ಜಿಲ್ಲಾಧಿಕಾರಿಗಳ ಮೂಲಕ ಮರಳು ಗಣಿಗಾರಿಕೆಗೆ ಪರವಾನಗಿ ನೀಡಲಿ. ಮನೆ ಕಟ್ಟಲು ಅಗತ್ಯವಿರುವ ಸೈಜುಗಲ್ಲುಗಳಿಗೆ ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.

ಕೆಂಪುಕಲ್ಲಿನ( Laterite) ಗಣಿಗಾರಿಕೆಗೆ 71 ಕಾರ್ಯಾದೇಶಗಳನ್ನು ಒಂದು ವರ್ಷದ ಅವಧಿಗೆ ನೀಡಲಾಗಿದೆ. ಖನಿಜವನ್ನು ಬಾಕ್ಸೈಟ್ ಆಗಿ ವಿಂಗಡಿಸಿರುವುದರಿಂದ ಮಾಚ್​ 17, 2023ರಂದು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994ಗೆ ತಿದ್ದುಪಡಿ ತಂದು ತಿದ್ದುಪಡಿ ನಿಯಮ 2023 ಜಾರಿಗೊಳಿಸಲಾಗಿದೆ. ಹೀಗಾಗಿ ಲ್ಯಾಟರೈಟ್ ಖನಿಜಕ್ಕೆ ಕಾರ್ಯಾದೇಶ ನೀಡುವುದನ್ನು ಕೈಬಿಡಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ