Breaking News

ಡಿಜಿಟಲ್ ಮಾಧ್ಯಮ ನ್ಯೂಸ್​ಕ್ಲಿಕ್ ಪ್ರಕರಣ: ಪತ್ರಕರ್ತೆ ಮನೆ ಮೇಲೆ ದಾಳಿ!

Spread the love

ಪತನಂತಿಟ್ಟ (ಕೇರಳ): ಚೀನಾ ಕಂಪನಿಗಳಿಂದ ಅಕ್ರಮವಾಗಿ ಹಣ ಪಡೆದ ಆರೋಪದ ಮೇರೆಗೆ ಡಿಜಿಟಲ್ ಮಾಧ್ಯಮ ನ್ಯೂಸ್​ಕ್ಲಿಕ್ (Newsclick)ಗೆ ಸಂಬಂಧಿಸಿದಂತೆ ವಿವಿಧ ಸ್ಥಳಗಳಲ್ಲಿ ಇತ್ತೀಚೆಗಷ್ಟೇ ದೆಹಲಿ ಪೊಲೀಸರು ದಾಳಿ ನಡೆಸಿದ್ದರು.

ಕೆಲ ಪತ್ರಕರ್ತರ ಮನೆ ಮೇಲೆ ದಾಳಿ ನಡೆಸಲಾಗಿತ್ತು. ಶುಕ್ರವಾರವೂ ದಾಳಿ ನಡೆಸಿದ ದೆಹಲಿ ಪೊಲೀಸರು, ಮಲಯಾಳಿ ಪತ್ರಕರ್ತೆ ಹಾಗೂ ನ್ಯೂಸ್‌ಕ್ಲಿಕ್‌ನ ಮಾಜಿ ಉದ್ಯೋಗಿ ಅನುಷಾ ಪೌಲ್ ಅವರ ಲ್ಯಾಪ್‌ಟಾಪ್ ಮತ್ತು ಫೋನ್ ವಶಪಡಿಸಿಕೊಂಡಿದ್ದಾರೆ.

ಕೊಡುಮೋನ್ ಬಳಿಯ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ದೆಹಲಿ ಪೊಲೀಸರ ಮೂವರು ಸದಸ್ಯರ ತಂಡ ಅನುಷಾ ಪೌಲ್ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿತು. ನಂತರ ಲ್ಯಾಪ್‌ಟಾಪ್ ಮತ್ತು ಫೋನ್ ವಶಪಡಿಸಿಕೊಂಡಿದ್ದಾರೆ.

ರೈತರ ಪ್ರತಿಭಟನೆ, ಎನ್‌ಆರ್‌ಸಿ – ಸಿಎಎ ವಿರೋಧಿ ಪ್ರತಿಭಟನೆಗಳು, ಕೇಂದ್ರ ಸರ್ಕಾರದ ಕೋವಿಡ್​ 19 ನಿರ್ವಹಣೆ ಸಂಬಂಧ ವರದಿ ಮಾಡಲಾಗಿದೆಯೇ ಎಂಬ ಪ್ರಶ್ನೆಗಳು ನ್ಯೂಸ್‌ಕ್ಲಿಕ್‌ನ ಮಾಜಿ ಉದ್ಯೋಗಿ ಅನುಷಾ ಪೌಲ್ ಅವರಿಗೆ ಎದುರಾಗಿವೆಯಂತೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತು ಆರ್‌ಎಸ್‌ಎಸ್ ವಿರುದ್ಧ ಧ್ವನಿ ಎತ್ತುತ್ತಿದ್ದ ಸಂಸ್ಥೆ ಮತ್ತು ಅದರ ಉದ್ಯೋಗಿಗಳಿಗೆ ಬೆದರಿಕೆ ಹಾಕುವ ರೀತಿಯಿದು ಎಂದು ಅನುಷಾ ಪೌಲ್ ಇದೇ ವೇಳೆ ಆರೋಪಿಸಿದ್ದಾರೆ.

ಕುಟುಂಬ ಸದಸ್ಯರ ಚಿಕಿತ್ಸೆಗಾಗಿ ಅನುಷಾ ಅವರು ಕೇರಳದಲ್ಲಿ ನೆಲೆಸಿದ್ದರು. ಸಿಪಿಐ (ಎಂ)ನ ದೆಹಲಿ ರಾಜ್ಯ ಕಾರ್ಯದರ್ಶಿ ಕೆ ಎಂ ತಿವಾರಿ ಅವರ ಬಗ್ಗೆ ತಿಳಿದಿದೆಯೇ ಎಂದು ದೆಹಲಿ ಪೊಲೀಸರು ನನ್ನನ್ನು ಪ್ರಶ್ನಿಸಿದರು ಎಂದು ಪೌಲ್​​ ಮಾದ್ಯಮದವರಲ್ಲಿ ತಿಳಿಸಿದ್ದಾರೆ. ಅದಕ್ಕೆ, ನನಗೆ ತಿಳಿದಿದೆ ಎಂದು ಉತ್ತರಿಸಿದೆ. ಅವರು ಸಿಪಿಐ (ಎಂ)ನ ರಾಜ್ಯ ಕಾರ್ಯದರ್ಶಿ. ನಾನು ಸಿಪಿಐ (ಎಂ)ನ ಕಾರ್ಯಕರ್ತೆ. ನಾನು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾದ ದೆಹಲಿ ಘಟಕದ ರಾಜ್ಯ ಸಮಿತಿ ಸದಸ್ಯೆ (DYFI) ಎಂದು ತಿಳಿಸಿದರು


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ