Breaking News

100 ಕರ್ನಾಟಕ ಸಾರಿಗೆ ಹಾಗೂ 40 ನಾನ್​ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್​​​​ಗಳಿಗೆ ಸಿಎಂ, ಡಿಸಿಎಂ ಚಾಲನೆ

Spread the love

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಗ್ರ್ಯಾಂಡ್​ ಸ್ಟೆಪ್ಸ್ ಬಳಿ ಇಂದು ಆಯೋಜಿಸಿದ್ದ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್​​​ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸಿದರು.

 

 ‘ಪಲ್ಲಕ್ಕಿ’ಗೆ ಚಾಲನೆಇದೇ ವೇಳೆ ಪಾಯಿಂಟ್​ ಟು ಪಾಯಿಂಟ್ ಕಾರ್ಯಾಚರಣೆಗೆ ನೂತನ ಮಾದರಿಯ ಮೇಲ್ದರ್ಜೆಗೇರಿಸಿದ ಕರ್ನಾಟಕ ಸಾರಿಗೆ ಬಸ್​​​ಗಳಿಗೂ ಸಿಎಂ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಇಂದು ನಾವು ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದೇವೆ. ನಮ್ಮ ಪ್ರಣಾಳಿಕೆಯಲ್ಲಿ ನಾವು ಗ್ಯಾರಂಟಿ ಯೋಜನೆ ಘೋಷಿಸಿದಾಗ ಅನೇಕರು ನಮ್ಮನ್ನು ಟೀಕಿಸಿದರು. ಬೇರೆ ರಾಜ್ಯದ ಮುಖ್ಯಮಂತ್ರಿಗಳು, “ನಿಮ್ಮಿಂದ ನಾವು ಇಕ್ಕಟ್ಟಿಗೆ ಸಿಲುಕಿದ್ದೇವೆ” ಎಂದು ನನ್ನನ್ನು ಕೇಳಿದ್ದರು.

ಹೆಣ್ಣು ಕುಟುಂಬದ ಕಣ್ಣು, ಬೆಲೆ ಏರಿಕೆ ಸಮಸ್ಯೆಗೆ ಪರಿಹಾರ ನೀಡಿ ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಪ್ರಯತ್ನ ನಮ್ಮ ಸರ್ಕಾರ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳ ಪೈಕಿ ಮೊದಲು ಜಾರಿಗೆ ಬಂದಿದ್ದು ಶಕ್ತಿ ಯೋಜನೆ. ಈ ಯೋಜನೆಯಲ್ಲಿ ಈವರೆಗೂ ಸುಮಾರು 70.73 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.

 ‘ಪಲ್ಲಕ್ಕಿ’ಗೆ ಚಾಲನೆಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಈ ಮೊತ್ತ ನೀಡಬೇಕಾಗಿದ್ದು. ಸರ್ಕಾರದ ಮೇಲೆ ಹೊರೆ ಇದೆ. ಕಳೆದ ಏಳೆಂಟು ವರ್ಷಗಳಿಂದ ರಾಜ್ಯದ ಬಸ್​ ದರದಲ್ಲಿ ಏರಿಕೆ ಮಾಡಿಲ್ಲ. ಸಾರಿಗೆ ಸಂಸ್ಥೆಗಳನ್ನು ವೃತ್ತಿಪರತೆಯಲ್ಲಿ ಮುನ್ನಡೆಸಲು ಬದ್ಧತೆ ಇಲ್ಲದ ಕಾರಣ ಸಂಸ್ಥೆ ಸೋರಗುವಂತಾಗಿದೆ. ಸರ್ಕಾರಿ ಸಂಸ್ಥೆಯಾಗಿ ಲಾಭ ಮಾಡುವುದರ ಜತೆಗೆ, ಜನರಿಗೂ ಅನುಕೂಲ ಮಾಡಿಕೊಡಬೇಕು. ಈ ಸಂಸ್ಥೆಯ ಕಾರ್ಮಿಕರ ಹಿತವನ್ನು ನಾವು ಕಾಯಬೇಕು. ಹೀಗಾಗಿ ಸಂಸ್ಥೆ ಲಾಭ ಕಾಣುವುದು ಮುಖ್ಯ. ಕಾರ್ಮಿಕರ ಹಿತ ಕಾಯಲು ಅಪಘಾತದಲ್ಲಿ ಮೃತಪಟ್ಟ ಸಾರಿಗೆ ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ.ವರೆಗೂ ವಿಮಾ ಪರಿಹಾರ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಇತರ ರಾಜ್ಯದ ಇತರ ಸಾರಿಗೆ ಸಂಸ್ಥೆಗಳಿಗೂ ವಿಸ್ತರಿಸಿ, ಎಲ್ಲ ಸಂಸ್ಥೆಗಳನ್ನು ಸಮಾನವಾಗಿ ನೋಡುವ ಕೆಲಸ ಮಾಡುತ್ತೇವೆ ಎಂದರು.


Spread the love

About Laxminews 24x7

Check Also

ಕನ್ನೇರಿ ಶ್ರೀ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ; ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Spread the love ವಿಜಯಪುರಕನ್ನೇರಿ ಶ್ರೀ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ; ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ