ಬೆಳಗಾವಿ ಕರ್ನಾಟಕ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ಎರಡು ಕೋಟಿ ಅನುದಾನ ಕೊಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಸಡಗರ ದಿಂದ ಆಚರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು
ಬೆಳಗಾವಿ ಕರವೇ ಅಧ್ಯಕ್ಷ ದೀಪಕ ಗುಡಗನಟ್ಟಿ ಮಾತುನಾಡಿ ಇಡೀ ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ ಮಾಡುವುದು ಬೆಳಗಾವಿಯಲ್ಲಿ ಮಾತ್ರ , ಮೈಸೂರು ದಸರಾ ನೋಡಲು ವಿಶ್ವದ ನಾನಾ ಕಡೇಯಿಂದ ಬರುತ್ತಾರೂ ಹಾಗೇ ಬೆಳಗಾವಿಯ ರಾಜ್ಯೋತ್ಸವ ನೋಡಲು ರಾಜ್ಯದ ವಿವಿಧ ಜಿಲ್ಲೆಯಿಂದ ಜನ ಬರುತ್ತಾರೆ ,
ರಾಜ್ಯ ಸರ್ಕಾರ ಈ ಬಾರಿ ರಾಜ್ಯೋತ್ಸವ ಆಚರಣೆಗೆ 2 ಕೋಟಿ ಅನುದಾನವನ್ನು ಕೊಡಬೇಕು , ಮೈಸೂರು ದಸರಾದಲ್ಲಿ ಏರ್ಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮ ಥರ ಬೆಳಗಾವಿಯಲ್ಲೂ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು ,ಮತ್ತು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಬೆಳಗಾವಿಯಲ್ಲಿ ನಡೆಸಬೇಕು , ಕರ್ನಾಟಕ ರಾಜ್ಯೋತ್ಸವ ವೇಳೆ ಎಂಇಎಸ್ ಕರಾಳ ದಿನಾಚರಣೆ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಬಾರದು ಎಂದರು
Laxmi News 24×7