ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನದ ಹಿಂದೆ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲ ಅಂತಾ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ವಿನಯ ಕುಲಕರ್ಣಿ ಬಂಧನ ವಿಚಾರವಾಗಿ ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜಿ ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ನಡೆದ ದಿನದಿಂದಲೇ ಈ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಒತ್ತಾಯ ಇತ್ತು. ಅದರಂತೆ ಈಗ ತನಿಖೆ ನಡೆದಿದೆ ಎಂದರು.
ಕೊಲೆಯಾಗಿರುವ ಯೋಗೀಶಗೌಡ ಅವರ ಕುಟುಂಬದ ಸದಸ್ಯರಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮ ಉದ್ದೇಶ. ಹೀಗಿರುವಾಗ ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂಬ ವಿರೋಧ ಪಕ್ಷದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸವದಿ ಹೇಳಿದರು.
Laxmi News 24×7