ಮಂಡ್ಯ : ಮಂಡ್ಯದಲ್ಲಿ ಕಾವೇರಿ ಕಿಚ್ಚು ಆರುವ ಲಕ್ಷಣ ಕಾಣುತ್ತಿಲ್ಲ. ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಹೋರಾಟ ನಡೆಯುತ್ತಲೇ ಇದೆ.
ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಧರಣಿ ಮುಂದುವರೆದಿದ್ದು, ಹಲವಾರು ಸಂಘಟನೆಗಳು ಬೆಂಬಲ ಸೂಚಿಸುತ್ತಿವೆ. ಮೈಸೂರು, ಬೆಂಗಳೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕುತ್ತಿದ್ದಾರೆ. ಸರ್ಕಾರ ಮಾತ್ರ ಈವರೆಗೆ ಯಾವುದೇ ತೀರ್ಮಾನ ಮಾಡದೆ, ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾದ್ರೆ ಈವತ್ತಿನ ಹೋರಾಟಗಳು ಹೇಗೆಲ್ಲಾ ನಡೀತು ಅನ್ನೋದರ ಮಾಹಿತಿ ಇಲ್ಲಿದೆ.
ಇವತ್ತು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರೋ ಧರಣಿ ಮುಂದುವರೆದಿದ್ದು, ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದವು. ಇಂದು ಕುಂಭಕರ್ಣನ ವೇಷ ಧರಿಸಿ ಅಣಕು ಪ್ರತಿಭಟನೆ ನಡೆಸಿದ್ರು. ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಕುಂಭಕರ್ಣನ ರೀತಿ ನಿದ್ರಿಸುತ್ತಿದ್ದಾರೆ. ಅನ್ನದಾತನ ಕೂಗು ಇವರಿಗೆ ಕೇಳಿಸುತ್ತಿಲ್ಲ. ಎಷ್ಟೇ ಹೋರಾಟ ನಡೆಸಿದರೂ ನಿದ್ರಾವಸ್ಥೆಯಲ್ಲಿದ್ದಾರೆ. ನಮ್ಮ ಕೂಗು ಅವರಿಗೆ ಕೇಳಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.