ಬೆಂಗಳೂರು : ಖಾಸಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಅಶ್ವಿನಿ ಪುನೀತ್ ರಾಜ್ಕುಮಾರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ ಜೊತೆಗಿದ್ದರು.
ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರ ಶಿಲ್ಪದ ಸಂಗ್ರಹದ ಅನಾವರಣ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಸಿಎಂಗೆ ಆಹ್ವಾನ ನೀಡಿದರು. ನಗರದ ಖಾಸಗಿ ಹೊಟೇಲ್ನಲ್ಲಿ ಅ.16ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
Laxmi News 24×7