Breaking News

ಕೇಂದ್ರ ತಂಡಕ್ಕೆ ನಮ್ಮ ವಸ್ತುಸ್ಥಿತಿಯ ಮನವಿ ಮನವರಿಕೆಯಾಗಿದೆ- ಸಚಿವ ಕೃಷ್ಣ ಬೈರೇಗೌಡ

Spread the love

ಬೆಂಗಳೂರು : ರಾಜ್ಯದ ಬರ ಅಧ್ಯಯನಕ್ಕಾಗಿ ಆಗಮಿಸಿರುವ ಕೇಂದ್ರ ತಂಡಕ್ಕೆ ನಾವು ಪರಿಸ್ಥಿತಿಯನ್ನು ವಸ್ತುಸ್ಥಿತಿಯಿಂದ ವಿವರಿಸಿದ್ದು, ಅವರಿಗೆ ಮನವರಿಕೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

 

ವಿಧಾನಸೌಧದಲ್ಲಿ ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಬರ ಅಧ್ಯಯನ ತಂಡ ಕೇಂದ್ರ ಸರ್ಕಾರಕ್ಕೆ ಒಂದು ವಾರದಲ್ಲಿ ವರದಿ ಸಲ್ಲಿಸಲಿದೆ. ಎಷ್ಟು ಪರಿಹಾರ ಕೊಡುತ್ತಾರೆ ನೋಡೋಣ. ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿದ ತಂಡ ಪರಿಸ್ಥಿತಿ ಅವಲೋಕನ ಮಾಡಿದೆ. ಕುಡಿಯುವ ನೀರು,‌ ನರೇಗಾ ಕಾಮಗಾರಿ, ಮೇವು‌ ಪರಿಸ್ಥಿತಿ ಅವಲೋಕಿಸಿದ್ದಾರೆ. ನಮ್ಮ ಮನವಿ ಆಧಾರದಲ್ಲಿ ಬರ ಅಧ್ಯಯನ ತಂಡ ಬಂದು ರಾಜ್ಯದಲ್ಲಿ ಪ್ರವಾಸ ಮಾಡಿದೆ. ಪರಿಶೀಲನೆ ಸಂದರ್ಭದಲ್ಲಿ ನಮ್ಮ ಮನವಿ ವಸ್ತುಸ್ಥಿತಿಯಿಂದ ಕೂಡಿತ್ತು. ತಳಮಟ್ಟದಲ್ಲಿ ಸಾಕಷ್ಟು ರೈತರಿಗೆ ಬೆಳೆ ಹಾನಿ ತೊಂದರೆ ಆಗಿದೆ ಎಂದು ಮನವರಿಕೆಯಾಗಿದೆ. ಹಿಂಗಾರು ಮಳೆ ತೊಂದರೆ ಆಗಬಹುದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅಧ್ಯಯನ ತಂಡಕ್ಕೆ ರಾಜ್ಯದ ಭೇಟಿ ಸುಗಮವಾಗಿ ಆಗುವಂತೆ ವ್ಯವಸ್ಥೆ ಮಾಡಲಾಗಿದೆ. ನಮ್ಮ ಮನವಿ ವಸ್ತುಸ್ಥಿತಿಯಿಂದ ಕೂಡಿದೆ ಎಂದು ಕೇಂದ್ರ ತಂಡವೂ ಹೇಳಿದೆ. ಸಣ್ಣ, ಅತಿ ಸಣ್ಣ ರೈತರ ಅಂಕಿ‌ಸಂಖ್ಯೆ ಕೇಳಿದ್ದಾರೆ. ಅದನ್ನು ಒದಗಿಸಿಕೊಡುತ್ತೇವೆ” ಎಂದರು.

“ರಾಜ್ಯದಲ್ಲಿ ವಿಚಿತ್ರ ಹವಾಮಾನ ಪರಿಸ್ಥಿತಿ ಇದೆ. ಕೆಲವು ತಿಂಗಳಲ್ಲಿ ವಾಡಿಕೆಗಿಂತ ಮಳೆ ಜಾಸ್ತಿಯಾದರೆ, ಕೆಲವು ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿದೆ. ಮಳೆ ಸ್ಥಿತಿಗತಿಗಳ ಬಗ್ಗೆ‌ ಸ್ಪಷ್ಟತೆ ಇಲ್ಲದ ವಾತಾವರಣವಿದೆ. ಹವಾಮಾನ ಏರುಪೇರನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಇದಕ್ಕನುಗುಣವಾಗಿ ಸರ್ಕಾರದ ನೀತಿ, ಕಾರ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವರಿಕೆ ಮಾಡಿದ್ದೇವೆ” ಎಂದು ಹೇಳಿದರು


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ