Breaking News
Home / ರಾಜಕೀಯ / ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ… ಛತ್ತೀಸ್​ಗಢದಲ್ಲಿ 2ಹಂತದ ವೋಟಿಂಗ್​.. ಡಿಸೆಂಬರ್ 3ಕ್ಕೆ ಚುನಾವಣಾ ಫಲಿತಾಂಶ ಪ್ರಕಟ

ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ… ಛತ್ತೀಸ್​ಗಢದಲ್ಲಿ 2ಹಂತದ ವೋಟಿಂಗ್​.. ಡಿಸೆಂಬರ್ 3ಕ್ಕೆ ಚುನಾವಣಾ ಫಲಿತಾಂಶ ಪ್ರಕಟ

Spread the love

Assembly elections 2023: ಚುನಾವಣಾ ಆಯೋಗವು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದೆ. ನವೆಂಬರ್ 23 ರಂದು ರಾಜಸ್ಥಾನ, ಮಧ್ಯಪ್ರದೇಶ ನವೆಂಬರ್ 17, ತೆಲಂಗಾಣ ನವೆಂಬರ್ 30, ಛತ್ತೀಸ್​ಗಢ ನವೆಂಬರ್ 7ರಂದು ಮೊದಲನೇ ಹಂತ ಹಾಗೂ 17 ರಂದು ಎರಡನೇ ಹಂತದ ಮತದಾನ ನಡೆಯಲಿದೆ.

ಡಿಸೆಂಬರ್ 3 ರಂದು ಮತ ಎಣಿಕೆ ಜರುಗಲಿದೆ.

ನವದೆಹಲಿ: ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಚುನಾವಣಾ ಆಯೋಗವು ಪ್ರಕಟಿಸಿದೆ.

ನವೆಂಬರ್ 17 ರಂದು ಮಧ್ಯಪ್ರದೇಶ, ನವೆಂಬರ್ 7 ರಂದು ಮಿಜೋರಾಂ, ನವೆಂಬರ್ 23 ರಂದು ರಾಜಸ್ಥಾನ, ನವೆಂಬರ್ 30 ರಂದು ತೆಲಂಗಾಣ, ಛತ್ತೀಸ್‌ಗಢದಲ್ಲಿ ನವೆಂಬರ್ 7ಕ್ಕೆ ಮೊದಲ ಹಂತದ ಮತದಾನ ನಡೆದರೆ, ನ.17 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.

ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನಇಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು,”40 ದಿನಗಳಲ್ಲಿ ಎಲ್ಲಾ 5 ರಾಜ್ಯಗಳಿಗೆ ಭೇಟಿ ನೀಡಿ ರಾಜಕೀಯ ಪಕ್ಷಗಳು, ಕೇಂದ್ರ ಮತ್ತು ರಾಜ್ಯ ಜಾರಿ ಸಂಸ್ಥೆಗಳೊಂದಿಗೆ ಚರ್ಚೆ ನಡೆಸಲಾಗಿದೆ” ಎಂದು ಅವರು ತಿಳಿಸಿದರು.

 

 

”ಮಿಜೋರಾಂನಲ್ಲಿ ಒಟ್ಟು ಮತದಾರರು 8.52 ಲಕ್ಷ, ಛತ್ತೀಸ್‌ಗಢದಲ್ಲಿ 2.03 ಕೋಟಿ, ಮಧ್ಯಪ್ರದೇಶದಲ್ಲಿ 5.6 ಕೋಟಿ, ರಾಜಸ್ಥಾನದಲ್ಲಿ 5.25 ಕೋಟಿ ಮತ್ತು ತೆಲಂಗಾಣದಲ್ಲಿ 3.17 ಕೋಟಿ ಮತದಾರರು ಇದ್ದಾರೆ. ಸುಮಾರು 60 ಲಕ್ಷ ಮೊದಲ ಬಾರಿಗೆ ಮತದಾರರು (18-19 ವರ್ಷ) 5 ರಾಜ್ಯಗಳ ಚುನಾವಣೆಗಳಲ್ಲಿ ಭಾಗವಹಿಸುತ್ತಾರೆ. ಅರ್ಹತಾ ದಿನಾಂಕಗಳ ತಿದ್ದುಪಡಿಯಿಂದಾಗಿ 15.39 ಲಕ್ಷ ಯುವ ಮತದಾರರು ಚುನಾವಣೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಯುವ ಮತದಾರರನ್ನು ಪ್ರೇರೇಪಿಸಲು, 2,900ಕ್ಕೂ ಹೆಚ್ಚು ಮತಗಟ್ಟೆಗಳನ್ನು ಯುವಕರು ನಿರ್ವಹಿಸುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ