Breaking News

ಡಿಎಚ್​ಒ ಕಚೇರಿ ಸಿಬ್ಬಂದಿಯಿಂದ ಕಚೇರಿ ಹಿಂಭಾಗದಲ್ಲಿ ಎಣ್ಣೆ ಪಾರ್ಟಿ

Spread the love

ಬೆಳಗಾವಿ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ(ಡಿಹೆಚ್‌ಒ)ಯಲ್ಲಿ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಕೇಳಿ ಬಂದಿದೆ.

ಸಿಬ್ಬಂದಿ ಮದ್ಯಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ.

ನಗರದ ಟಿಳಕವಾಡಿಯಲ್ಲಿರುವ ಡಿಹೆಚ್​​ಒ ಕಚೇರಿ ಹಿಂಭಾಗದಲ್ಲಿರುವ ಕೊಠಡಿಯಲ್ಲಿನ ಗಾಂಧಿಜೀ ಫೋಟೋ ಎದುರಿಗೆಯೇ ಸಿಬ್ಬಂದಿ ಮದ್ಯಪಾನ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ, ಈ ಘಟನೆ ಯಾವಾಗ ನಡೆದಿದೆ ಎಂಬ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಈ ವಿಡಿಯೋದಲ್ಲಿ ಸಿಬ್ಬಂದಿ ಸಾರಾಯಿ ಕುಡಿಯುತ್ತಿರುವುದು, ಸಿಗರೇಟು ಸೇದುತ್ತಿರುವುದು, ಡ್ಯಾನ್ಸ್ ಹಾಗೂ ಹರಟೆ ಹೊಡೆಯುತ್ತಿರುವುದನ್ನು ಕಾಣಬಹುದು. ಎಣ್ಣೆ ಪಾರ್ಟಿಯಲ್ಲಿ 6 ಜನ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.

ಘಟನೆ ಬಗ್ಗೆ ಡಿಹೆಚ್​​ಒ ಪ್ರತಿಕ್ರಿಯೆ ಹೀಗಿದೆ: ಈ ಕುರಿತು ಪ್ರತಿಕ್ರಿಯಿಸಿರುವ ಡಿಹೆಚ್​ಓ ಡಾ. ಮಹೇಶ ಕೋಣಿ, ”ವಿಡಿಯೋದಲ್ಲಿ ನೋಡಿದಾಗ ಮೇಲ್ನೋಟಕ್ಕೆ ನಮ್ಮ ಸಿಬ್ಬಂದಿಗಳೇ ಪಾರ್ಟಿ ಮಾಡಿರುವುದು ಕಂಡುಬಂದಿದೆ. ಇದಕ್ಕೂ ಮುಂಚೆ ಈ ಘಟನೆ ನಮ್ಮ ಗಮನಕ್ಕೆ ಬಂದಿಲ್ಲ. ಕೂಲಂಕುಷವಾಗಿ ತನಿಖೆ ಮಾಡಿ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುತ್ತೇನೆ. ಸರ್ಕಾರಿ ಸಿಬ್ಬಂದಿಗಳು ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡುವುದು ಸರ್ಕಾರಿ ಕರ್ತವ್ಯಕ್ಕೆ ವಿರುದ್ಧವಾಗಿದೆ. ಈ ರೀತಿ ಮಾಡಿರುವುದು ತಪ್ಪು. ಈ ವಿಡಿಯೋವನ್ನು ಪರಿಶೀಲನೆ ಮಾಡಿ ತಪ್ಪು ಕಂಡು ಬಂದಲ್ಲಿ ನಮ್ಮ ಕಚೇರಿ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುತ್ತೇನೆ” ಎಂದು ಹೇಳಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ