Breaking News

ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ: ಆರೋಪಿ ಗುರುತು ಪತ್ತೆ ಹಚ್ಚಿದ ಬೆಳಗಾವಿ ಪೊಲೀಸರು

Spread the love

ಬೆಳಗಾವಿ : ಜಿಲ್ಲೆಯಲ್ಲಿರುವ ಹಿಂಡಲಗಾ ಕೇಂದ್ರ ಕಾರಾಗೃಹ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಸ್ಫೋಟಿಸುವುದಾಗಿ ಹಾಗೂ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಗುರುತು ಪತ್ತೆ ಹಚ್ಚುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.

 

ಹುಕ್ಕೇರಿಯ ಕಿರಣ ಮೋಷಿ (48) ಬೆದರಿಕೆ ಕರೆ ಮಾಡಿದ್ದ ಆರೋಪಿ. ತನ್ನ ಪತ್ನಿಯ ಹೆಸರಿನಲ್ಲಿರುವ ಸೀಮ್‌ನಿಂದ ಬಂದಿಖಾನೆ ಇಲಾಖೆಯ ಉತ್ತರ ವಲಯದ ಡಿಐಜಿಪಿ ಟಿ ಪಿ ಶೇಷ ಅವರಿಗೆ ಭಾನುವಾರ ಮಧ್ಯಾಹ್ನ ಕರೆ ಮಾಡಿ ಬೆದರಿಕೆ ಹಾಕಿದ್ದನು. ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು, ಸದ್ಯ ಆರೋಪಿಯನ್ನು ಆ ತಂಡ ಪತ್ತೆ ಹಚ್ಚಿದೆ. ಆರೋಪಿ ಕಿರಣ ಮೋಷಿ ಈ ಹಿಂದೆ 2022 ರಲ್ಲಿ ಬೇರೆಯವರ ಅಕೌಂಟ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಆ ವೇಳೆ ಸೈಬರ್ ಕ್ರೈಮ್ ಆರೋಪದಡಿ 10 ದಿನಗಳ ಕಾಲ ಹಿಂಡಲಗಾ ಜೈಲಿನಲ್ಲಿ ಬಂಧಿಯಾಗಿದ್ದನು. ಅಲ್ಲದೇ, ಮೋಜು-ಮಸ್ತಿ ಹಾಗೂ ದಿಢೀರ್ ಜನಪ್ರಿಯವಾಗಬೇಕು ಎಂಬ ದುರುದ್ದೇಶದಿಂದ ಈ ರೀತಿ ಒಂದಿಲ್ಲೊಂದು ಹುಚ್ಚಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ