ಬೆಳಗಾವಿ: ಕಾಮಗಾರಿಯ ಬಿಲ್ ವಿಳಂಬವಾಗಿದೆ ಎಂದು ಆರೋಪಿಸಿದ ಗುತ್ತಿಗೆದಾರನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ಇಂದು (ಮಂಗಳವಾರ) ನಡೆದಿದೆ. ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ.
ಬಿಲ್ ವಿಳಂಬವಾಗಿದೆ ಎಂದು ಆರೋಪಿಸಿದ ನಾಗಪ್ಪ ಲೋಕೋಪಯೋಗಿ ಇಲಾಖೆ ಕಚೇರಿಯ ಮುಂದೆ ಕುಟುಂಬಸಹಿತ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
Laxmi News 24×7