Breaking News

ಬೆಂಗಳೂರಲ್ಲಿ ಜ್ಯುವೆಲರಿ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

Spread the love

ಬೆಂಗಳೂರು: ಕಳೆದ ವಾರ ನಗರದ ಹಲವು ಉದ್ಯಮಿಗಳ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದೂ ಸಹ ತಮ್ಮ ಪರಿಶೀಲನೆ ಮುಂದುವರೆಸಿದ್ದಾರೆ.

ನಗರದ ಸುಮಾರು ಹತ್ತಕ್ಕೂ ಅಧಿಕ ಕಡೆಗಳಲ್ಲಿ‌ ಆದಾಯ ತೆರಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಉದ್ಯಮಿಗಳು, ಜ್ಯುವೆಲರಿ ಶಾಪ್ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸರ್ಜಾಪುರ ಬಳಿಯ ಮುಳ್ಳೂರು, ಆರ್.ಎಂ.ವಿ ಎಕ್ಸ್ಟೆನ್ಷನ್, ಬಿಇಎಲ್ ಸರ್ಕಲ್, ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ ಸೇರಿದಂತೆ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಪರಿಶೀಲನೆ ಮುಂದುವರೆದಿದೆ.

ಆದಾಯ ತೆರಿಗೆ ವಂಚನೆ ಆರೋಪ ಕಂಡು ಬಂದ ಹಿನ್ನೆಲೆಯಲ್ಲಿ ಚಿನ್ನ ಗಿರವಿ ಮತ್ತು ಖರೀದಿ ಮಾಡುವ ಕಂಪನಿಗಳ ಮೇಲೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ